– ಚನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಧನಕರ್ ದಂಪತಿ; ಜೊತೆಯಲ್ಲಿಯೇ ಉಪಹಾರ ಸೇವನೆ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve Gowda) ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಭೇಟಿಯಾದರು.
Advertisement
ಬೆಳಗ್ಗೆ 9 ಗಂಟೆಗೆ ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ, ಒಂದು ಗಂಟೆಗೂ ಹೆಚ್ಚು ಕಾಲ ಇದ್ದು, ಚನ್ನಮ್ಮ ದೇವೇಗೌಡರ ಆರೋಗ್ಯದ ಬಗ್ಗೆ ದೇವೇಗೌಡರಲ್ಲಿ ವಿಚಾರಿಸಿದರು.
Advertisement
ಚನ್ನಮ್ಮ ಅವರು ಆದಷ್ಟು ಬೇಗ ಗುಣಮಖರಾಗಲಿ. ಆ ನಂತರ ಅವರನ್ನು ತಾವು ದೆಹಲಿಗೆ ಕರೆದುಕೊಂಡು ಬನ್ನಿ ಎಂದು ಮಾಜಿ ಪ್ರಧಾನಿಗಳಿಗೆ ತಿಳಿಸಿದರು. ಇದಕ್ಕೆ ಮಾಜಿ ಪ್ರಧಾನಿಗಳು ಸಮ್ಮತಿಸಿ, ನಮ್ಮ ಮೇಲೆ ತಾವು ಇರಿಸಿರುವ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನನ್ನ ಹೃದಯ ತುಂಬಿ ಬಂದಿದೆ. ತಮ್ಮ ಆಗಮನ ನಮ್ಮ ಇಡೀ ಕುಟುಂಬಕ್ಕೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಉಪರಾಷ್ಟ್ರಪತಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ತಮ್ಮ ಕುಟುಂಬದವರನ್ನ ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರಬಲಿ ಪಡೆಯುತ್ತೆ: ಶಿವರಾಮೇಗೌಡ ವಾಗ್ದಾಳಿ
Advertisement
I was delighted to host Hon’ble Vice President of India, Shri Jagdeep Dhankar avaru, and Smt. Sudesh Dhankar, for breakfast at my residence, in Bangalore. Grateful that he made time to come. My son and Union Minister Shri @hd_kumaraswamy was also present. @VPIndia pic.twitter.com/lSvGRIPazA
— H D Devegowda (@H_D_Devegowda) October 26, 2024
Advertisement
ಜಗದೀಪ್ ಧನಕರ್ ಹಾಗೂ ಪತ್ನಿ ಸುದೇಶ್ ಧನಕರ್ ಅವರು, ಮಾಜಿ ಪ್ರಧಾನಿಗಳು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆಯಲ್ಲಿಯೇ ಉಪಾಹಾರ ಸೇವಿಸಿದರು. ಈ ಸಂದರ್ಭದಲ್ಲಿ ಅವರೆಲ್ಲರೂ ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಕುಟುಂಬದ ಎಲ್ಲಾ ಸದಸ್ಯರ ಕುಶಲೋಪರಿ ವಿಚಾರಿಸಿದರು. ವಿಶೇಷವಾಗಿ ಪುಟ್ಟ ಮಕ್ಕಳ ಜೊತೆ ಉಪರಾಷ್ಟ್ರಪತಿಗಳು ಕೆಲ ಕಾಲ ಕಳೆದರು.
ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬರಮಾಡಿಕೊಂಡರು. ಬೀಳ್ಕೊಟ್ಟ ನಂತರ ಮಾಧ್ಯಮಗಳ ಜತೆ ಮಾತನಾಡಿದ ಹೆಚ್‌ಡಿಕೆ, ಉಪರಾಷ್ಟ್ರಪತಿಗಳು ಹಾಗೂ ಮಾಜಿ ಪ್ರಧಾನಿಗಳ ನಡುವೆ ಸ್ನೇಹಪೂರ್ವಕ ಬಾಂಧವ್ಯ ಇದೆ. ಇಬ್ಬರೂ ಪರಸ್ಪರ ಗೌರವಭಾವ ಇರಿಸಿಕೊಂಡಿದ್ದಾರೆ. ಇದನ್ನು ಆನೇಕ ಸಲ ಕಣ್ಣಾರೆ ಕಂಡಿದ್ದೇನೆ ಎಂದರು.
ಇಬ್ಬರೂ ನಾಯಕರು ರೈತ ಕುಟುಂಬದ ಹಿನ್ನೆಲೆಯಿಂದ ಬಂದವರು. ಹೀಗಾಗಿ ಅವರಿಬ್ಬರ ಚರ್ಚೆ ಬಹುತೇಕ ಕೃಷಿ ಕೇಂದ್ರಿತವಾಗಿತ್ತು. ರೈತರ ಅಭಿವೃದ್ಧಿಯ ಬಗ್ಗೆ ಅವರು ಅನೇಕ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಮಾಹಿತಿ ಹಂಚಿಕೊಂಡರು. ನಂತರ ಉಪರಾಷ್ಟ್ರಪತಿ ದಂಪತಿ ಜೊತೆಗೆ ದೇವೇಗೌಡರ ಕುಟುಂಬ ಸದಸ್ಯರೆಲ್ಲರೂ ಸೇರಿ ಫೋಟೋ ತೆಗೆಸಿಕೊಂಡರು.
ಉಪರಾಷ್ಟ್ರಪತಿಗಳು ಅನೇಕ ಸಲ ಬೆಂಗಳೂರಿಗೆ ಬಂದಾಗ ದೇವೇಗೌಡರ ನಿವಾಸಕ್ಕೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಇವತ್ತು ಭೇಟಿ ನೀಡಿದ್ದಾರೆ. ಇನ್ನೂ ನಮ್ಮ ತಾಯಿ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ವಿಶೇಷವಾಗಿ ಉಪರಾಷ್ಟ್ರಪತಿಗಳು ನಮ್ಮ ತಾಯಿಯವರ ಆರೋಗ್ಯ ವಿಚಾರಿಸಿ, ಆದಷ್ಟು ಬೇಗ ಗುಣಮುಖರಾಗಬೇಕು ಎಂದು ಹಾರೈಸಿದರು. ಅವರು ತೋರಿದ ಪ್ರೀತಿ, ವಿಶ್ವಾಸ ಅಭಿಮಾನಕ್ಕೆ ನಮ್ಮ ಕುಟುಂಬ ಚಿರಋಣಿ ಆಗಿರುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿ ವಿಚಾರಣೆ; ಈಗ ಎ1 ಸಿದ್ದರಾಮಯ್ಯ ಸರದಿ – ಸದ್ಯದಲ್ಲೇ ಸಿಎಂಗೂ ನೋಟಿಸ್ ಸಾಧ್ಯತೆ