ಬಳ್ಳಾರಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತಮ್ಮ ಕುಟುಂಬ ಸಮೇತವಾಗಿ ಎರಡು ದಿನ ವಿಶ್ವವಿಖ್ಯಾತ ಹಂಪಿ ವೀಕ್ಷಣೆ ಮಾಡಲಿದ್ದಾರೆ.
ಆ.20 ಮತ್ತು 21 ರಂದು ತುಂಗಭದ್ರಾ ಡ್ಯಾಂ ಮತ್ತು ಐತಿಹಾಸಿಕ ಹಂಪಿ ಸ್ಮಾರಕಗಳ ವೀಕ್ಷಣೆಗೆ ಆಗಮಿಸುತ್ತಿದ್ದು ವೆಂಕಯ್ಯ ನಾಯ್ಡು ಅವರ ಜೊತೆಯಲ್ಲಿ ಅವರ ಧರ್ಮ ಪತ್ನಿ ಎಂ ಉಷಾ ಸಹ ಬರಲಿದ್ದಾರೆ. ಇದನ್ನೂ ಓದಿ: 1,250 ಕೋಟಿ ರೂ. ಜೊತೆ ಘನಿ ಪರಾರಿ – ಈಗ ಯುಎಇಯಲ್ಲಿ ಆಶ್ರಯ
Advertisement
Advertisement
ಸುಗಮ ಪ್ರವಾಸಕ್ಕಾಗಿ ಹಂಪಿಯಲ್ಲಿ ಹಲವು ರೀತಿ ಸಿದ್ಧತೆಗಳು ನಡೆಯುತ್ತಿದ್ದು, ಅ.20 ರಂದು ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊಸಪೇಟೆಯ ತಾಲೂಕು ಕ್ರೀಡಾಂಗಣಕ್ಕೆ ಸಂಜೆ 5:20 ಕ್ಕೆ ಆಗಮಿಸುವ ಅವರು ನಂತರ ತುಂಗಭದ್ರಾ ಡ್ಯಾಂ ವೀಕ್ಷಣೆ ಮಾಡಲಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್‌ರನ್ನು ಕಾಂಗ್ರೆಸ್ ಎರಡು ಬಾರಿ ಸೋಲಿಸಿತು: ಎ ನಾರಾಯಣ ಸ್ವಾಮಿ
Advertisement
ಭೇಟಿಯ ಬಳಿಕ ಕಮಲಾಪುರದ ಮಯೂರ ಭುವನೇಶ್ವರಿ ಹೊಟೇಲ್ ನಲ್ಲಿ ತಂಗಲಿದ್ದಾರೆ. ಆ.21 ರಂದು ಬೆಳಿಗ್ಗೆಯಿಂದ ಸಂಜೆವರಗೆ ಹಂಪಿಯ ಶ್ರೀವಿರೂಪಾಕ್ಷ ದೇವಸ್ಥಾನ, ಸಾಸುವೆಕಾಳು, ಕಡಲೇಕಾಳು ಗಣೇಶ, ಕೃಷ್ಣ ದೇವಸ್ಥಾನ, ಕಮಲ ಮಹಲ್, ಗಜಶಾಲೆ, ಮಹಾನವಮಿ ದಿಬ್ಬ, ವಿಜಯ ವಿಠ್ಠಲ ದೇವಸ್ಥಾನ ಮೊದಲಾದ ಸ್ಮಾರಕಗಳನ್ನು ವೀಕ್ಷಣೆ ಮಾಡಲಿದ್ದಾರೆ.