ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂದು ತಮ್ಮ 93ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನವದೆಹಲಿಯಲ್ಲಿರುವ ವಾಜಪೇಯಿ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಕೇಂದ್ರ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್ ತೆರಳಿ ಶುಭಾಶಯ ತಿಳಿಸಿದರು.
ಇವರ ಚಮತ್ಕಾರ ಹಾಗೂ ನಾಯಕತ್ವದಿಂದ ಭಾರತ ಸಾಕಷ್ಟು ಅಭಿವೃದ್ಧಿ ಕಂಡಿದೆ. ವಿಶ್ವ ಮಟ್ಟದಲ್ಲಿ ನಮ್ಮ ದೇಶದ ಪ್ರತಿಷ್ಠಿತೆಯನ್ನು ಹೆಚ್ಚಿಸಿದ್ದಾರೆ. ಅವರ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
Advertisement
Advertisement
Advertisement
ವಾಜಪೇಯಿ ಅವರು ಜನರನ್ನು ಒಟ್ಟಾಗಿ ಇರಲು ಒತ್ತಾಯಿಸಿದರು ಮತ್ತು ಕಷ್ಟದ ಕಾಲದಲ್ಲಿ ಭರವಸೆಯನ್ನು ಅವರು ಬಿಡಲಿಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕವಿತೆ ಮೂಲಕ ವಾಜಪೇಯಿ ಅವರಿಗೆ ಶುಭ ಕೋರಿದ್ದಾರೆ.
Advertisement
ವಾಜಪೇಯಿ ಅವರು 1991, 1996, 1998, 1999 ಹಾಗೂ 2004ರಲ್ಲಿ ಲಕ್ನೋ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಆಗಿದ್ದರು. 1924ರಲ್ಲಿ ಜನಿಸಿದ ವಾಜಪೇಯಿ ಅವರು 1942 ‘ಭಾರತ ಬಿಟ್ಟು ತೊಲಗಿ ಚಳುವಳಿ’ಯಲ್ಲಿ ರಾಜಕಾರಣಕ್ಕೆ ಪ್ರವೇಶಿಸಿದ್ದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.