ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ (Vice President Election) ಒಂದು ತಿಂಗಳಿಗಿಂತ ಕಡಿಮೆ ಅವಧಿ ಇರುವಂತೆಯೇ ಬಿಜೆಪಿ (BJP) ತನ್ನ ಅಭ್ಯರ್ಥಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot), ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಮತ್ತು ಬಿಹಾರ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಸೇರಿದಂತೆ ಸಂಭಾವ್ಯ ಅಭ್ಯರ್ಥಿಗಳೊಂದಿಗೆ ಚರ್ಚೆಯನ್ನು ಆರಂಭಿಸಿದೆ.
ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಥೂರ್ ಮತ್ತು ಜಮ್ಮು- ಕಾಶ್ಮೀರ ಮನೋಜ್ ಸಿನ್ಹಾ ಕೂಡಾ ಸಂಭಾವ್ಯ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಹಿಂದೂ – ಮುಸ್ಲಿಂ ಭಾವೈಕ್ಯತೆ | ಉರ್ದು ಶಾಲೆಯಲ್ಲಿ ಕೃಷ್ಣ – ರಾಧೆಯರ ವೇಷದಲ್ಲಿ ಮಿಂಚಿದ ಮಕ್ಕಳು
ಆರ್‌ಎಸ್‌ಎಸ್ ವಿಚಾರವಾದಿ ಶೇಷಾದ್ರಿ ಚಾರಿ ಹೆಸರು ಕೂಡಾ ಕೇಳಿಬರುತ್ತಿದೆ. ಅಲ್ಲದೆ, ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರನ್ನು ನಾಮನಿರ್ದೇಶಿತರನ್ನಾಗಿ ಪರಿಗಣಿಸಲಾಗಿದೆ. ಉಪ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ಮೂಲಗಳು ತಿಳಿಸಿವೆ.ಇದನ್ನೂ ಓದಿ: ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡ್ಬೇಕು, ಇಲ್ಲದಿದ್ರೆ ಸದನದಲ್ಲಿ ಹೋರಾಟ: ಆರ್.ಅಶೋಕ್
ಈ ಸಂಬಂಧ ಅಗಸ್ಟ್ 17ರಂದು ಬಿಜೆಪಿ ತನ್ನ ಸಂಸದೀಯ ಮಂಡಳಿ ಸಭೆ ಕರೆದಿದ್ದು ಈ ಸಭೆಯಲ್ಲಿ ಅಭ್ಯರ್ಥಿಯ ಆಯ್ಕೆ ತಿರ್ಮಾನವಾಗಲಿದೆ. ಇತ್ತ ಇಂಡಿಯಾ ಮೈತ್ರಿ ಅಗಸ್ಟ್ 18ರಂದು ಸಭೆ ನಡೆಸುತ್ತಿದ್ದು, ಪ್ರತಿಸ್ಪರ್ಧಿ ಅಭ್ಯರ್ಥಿಯ ಆಯ್ಕೆಯಾಗಲಿದೆ. ಇದನ್ನೂ ಓದಿ: ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್