ಕರ್ನಾಟಕ ರತ್ನ ಡಾ.ವಿಷ್ಣುವರ್ಧನ್ (Dr.Vishnuvardhan) ಅವರ 75ನೇ ಹುಟ್ಟುಹಬ್ಬ ಆಚರಿಸಲು ಸಜ್ಜಾಗಿರುವ ಫ್ಯಾನ್ಸ್‌ಗೆ ಖುಷಿ ಸುದ್ದಿ ಸಿಕ್ಕಿದೆ. ವಿಷ್ಣು ಸಮಾಧಿ ಇರುವ ಅಭಿಮಾನ್ ಸ್ಟುಡಿಯೋ (Abhiman Studio) ಅಕ್ಕಪಕ್ಕದಲ್ಲಿ ಕಾರ್ಯಕ್ರಮ ಆಯೋಜನೆಗೆ ಕೊನೆಗೂ ಪೊಲೀಸರು ಅನುಮತಿ ಕೊಟ್ಟಿದ್ದಾರೆ.
ಸಮಾಧಿ ಜಾಗ ವಿವಾದ ಕೋರ್ಟ್‌ನಲ್ಲಿರುವ ಕಾರಣ ಕಾರ್ಯಕ್ರಮಕ್ಕೆ ಬೆಳಗ್ಗೆ ಪೊಲೀಸರು ಅನುಮತಿ ಕೊಡಲು ನಿರಾಕರಿಸಿದ್ದರು. ಈ ಸಂಬಂಧ ಡಾ. ವಿಷ್ಣುಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಡಿಸಿಪಿ ಅನಿತಾರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಸಂಜೆ ಹೊತ್ತಿಗೆ ಷರತ್ತು ಬದ್ಧ ಅನುಮತಿ ಕೊಟ್ಟಿದ್ದು, ಅಭಿಮಾನ್ ಸ್ಟುಡಿಯೋ ಬಳಿ ಯಾರೂ ಹೋಗದೇ ನಿಗದಿ ಮಾಡಿರುವ ಜಾಗದಲ್ಲೇ ಸಂಭ್ರಮಾಚರಣೆ ಮಾಡುವಂತೆ ಡಿಸಿಪಿ ಸೂಚಿಸಿದ್ದಾರೆ.
ಡಿಸಿಪಿ ಒಪ್ಪಿಗೆಯ ಬೆನ್ನಲ್ಲೇ ಅಭಿಮಾನ ಸ್ಟುಡಿಯೋಗೆ 200 ಮೀಟರ್ ಅಂತರದಲ್ಲಿ 2 ಎಕರೆ ಜಾಗ ಬಾಡಿಗೆ ಪಡೆದು ವಿಷ್ಣು ಹುಟ್ಟುಹಬ್ಬ ಆಚರಣೆಗೆ ಫ್ಯಾನ್ಸ್ ಸಿದ್ಧತೆ ನಡೆಸಿದ್ದಾರೆ. ರಕ್ತದಾನ, ಅನ್ನದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.