DistrictsKarnatakaLatestMain Post

ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು- ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Advertisements

ಬೆಳಗಾವಿ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಬೆಳಗಾವಿ ನಗರದ ಜ್ಯೋತಿ ಕಾಲೇಜಿನ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಬಿ ಬಣ್ಣ ಎರಚಿ ಸಂಭ್ರಮಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

ತೀವ್ರ ಕುತೂಹಲ ಮೂಡಿಸಿದ್ದ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಗೆಲುವಿನ ನಗೆ ಬೀರಿದ್ದಾರೆ. ತಮ್ಮ ನೆಚ್ಚಿನ ನಾಯಕನ ಗೆಲುವು ಖಚಿತ ಆಗುತ್ತಿದ್ದಂತೆ ಬೆಳಗಾವಿಯ ಜ್ಯೋತಿ ಕಾಲೇಜಿನ ಹೊರಗಡೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರಕಾಶ್ ಹುಕ್ಕೇರಿ ಪರ ಘೋಷಣೆ ಕೂಗಿ ಸಂಭ್ರಮಿಸಿದರು. ಇದನ್ನೂ ಓದಿ: ಗೂಂಡಾಗಿರಿ ಕಾಂಗ್ರೆಸ್ ನಾಯಕರಿಗೆ ವಂಶಪಾರಂಪರ್ಯವಾಗಿ ಬಂದ ಉಡುಗೊರೆ- ಬಿಜೆಪಿ

ಎರಡನೇ ಸುತ್ತಿನ ಮತಎಣಿಕೆಯಲ್ಲಿ ಗೆಲುವಿನ ಕೋಟಾ ತಲುಪಿರುವ ಪ್ರಕಾಶ್ ಹುಕ್ಕೇರಿ 20,000 ಮತಗಳ ಪೈಕಿ 10,520 ಮತ ಪಡೆದಿದ್ದಾರೆ. ಅದರಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಶಾಹಾಪುರ 6,008 ಮತಗಳನ್ನು ಪಡೆದಿದ್ದು, ಪ್ರಕಾಶ್ ಹುಕ್ಕೇರಿ 4,512 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ದಾಖಲಿಸಿದ್ದಾರೆ.

Live Tv

Leave a Reply

Your email address will not be published.

Back to top button