ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರಿಗೆ ಆಹಾರ ಮತ್ತು ಆಶ್ರಯ ನೀಡಿ ಸಹಾಯ ಮಾಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
23 ವರ್ಷದ ಇಮಿತಿಯಾಜ್ ಅಹ್ಮದ್ ಮ್ಯಾಗ್ರೆ ನದಿಗೆ ಹಾರಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹೌತಿ ಬಂಡುಕೋರ ಮೇಲೆ ಸರಣಿ ದಾಳಿ ನಡೆಸಿ ಪೆಟ್ಟು ಕೊಡ್ತೇವೆ: ಬೆಂಜಮಿನ್ ನೆತನ್ಯಾಹು
ಶನಿವಾರ (ಮೇ 3) ಪೊಲೀಸರು ಮ್ಯಾಗ್ರೆನನ್ನ ಬಂಧಿಸಿದ್ದರು. ವಿಚಾರಣೆ ವೇಳೆ ಕುಲ್ಗಾಮ್‌ನ ತಂಗ್‌ಮಾರ್ಗ್‌ನಲ್ಲಿರುವ ಕಾಡಿನಲ್ಲಿ ಅಡಗಿರುವ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿರುವುದಾಗಿ ಆತ ಒಪ್ಪಿಕೊಂಡಿದ್ದ. ಬಳಿಕ ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ಮಾಡಲು ಭದ್ರತಾ ಪಡೆ ಅಧಿಕಾರಿಗಳು ಆರೋಪಿಯನ್ನು ಕರೆದೊಯ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ರಜೆ ರದ್ದು – ಅತ್ತ DRDOದಿಂದ ಏರ್‌ಶಿಪ್ ಪ್ರಯೋಗ ಯಶಸ್ವಿ
ಭಾನುವಾರ ಬೆಳಗ್ಗೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ವೇಶಾವ್ ನದಿಗೆ ಹಾರಿದ್ದಾನೆ. ಆದರೆ ನೀರಿನ ರಭಸಕ್ಕೆ ಸಿಲುಕಿ, ನೀರಿನಲ್ಲೇ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ ನೀರಿನಲ್ಲಿ ಮುಳುಗುತ್ತಿರುವ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.