ಮೈಸೂರು: ಸಾಂಸ್ಕೃತಿಕ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಅಂದಾಭಿಮಾನ ಪ್ರದರ್ಶಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ನಿ ಗೆಲುವು ಸಾಧಿಸಿದ ಕಾರಣ ಪತಿಗೆ ಕಾರ್ಯಕರ್ತರು 2 ಬಿಂದಿಗೆ ಹಾಲು ಸುರಿದು ಅಭಿಷೇಕ ಮಾಡಿದ್ದಾರೆ.
ಮಹಾನಗರ ಪಾಲಿಕೆ 36ನೇ ವಾರ್ಡ್ ಸದಸ್ಯೆಯಾಗಿ ರುಕ್ಮಿಣಿ ಆಯ್ಕೆಯಾಗಿದ್ದಾರೆ. ರುಕ್ಷ್ಮಿಣಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ಪತಿ ಮಾದೇಗೌಡರಿಗೆ ಅಭಿಮಾನಿಗಳು 2 ಬಿಂದಿಗೆ ಹಾಲಿನಲ್ಲಿ ಅಭಿಷೇಕ ಮಾಡಿದ್ದಾರೆ. ಮಾದೇಗೌಡ ಕೂಡ ಶ್ರೀರಾಂಪುರ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದಾರೆ. ಯರಗನಹಳ್ಳಿ ವಾರ್ಡ್‍ನ ಕೃಷ್ಣ ದೇವಸ್ಥಾನದ ಬಳಿ ಹಾಲಿನ ಅಭಿಷೇಕ ಮಾಡಿದ್ದಾರೆ.
Advertisement
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ನೋಡಿ ಎಲ್ಲರೂ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಜನ ಕುಡಿಯುವ ಹಾಲನ್ನು ಅಭಿಷೇಕ ಮಾಡಿಕೊಂಡಿರುವುದು ನಾಚಿಕೆಗೇಡಿನ ವಿಷಯ. ಅಧಿಕಾರ ಸಿಕ್ಕ ತಕ್ಷಣ ಈ ರೀತಿ ಮಾಡುವುದು ಸರಿಯಲ್ಲ. ಅಭಿಮಾನಿಗಳು ಈ ರೀತಿ ಮಾಡುವುದನ್ನು ಅವರು ತಡೆಯಬಹುದು. ಆದರೆ ಅವರು ತಮ್ಮ ಕಾರ್ಯಕರ್ತರಿಗೆ ಬುದ್ಧಿ ಮಾತನ್ನು ಹೇಳಲಿಲ್ಲ ಎಂದು ಜನರು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Advertisement
https://www.youtube.com/watch?v=bZRpM8QJCOo