ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚೀತಾ ಆಶಾ

Public TV
1 Min Read
KUNO

ಭೋಪಾಲ್​: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Madhya Pradesh’s Kuno National Park) ಆಶಾ (Aasha) ಹೆಸರಿನ ಚೀತಾ ಇಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

ಈ ವಿಚಾರವನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ (Bhupendra Yadav)​ ಅವರು ತಮ್ಮ ಎಕ್ಸ್​ ಖಾತೆಯ ಮೂಲಕ ತಿಳಿಸಿದ್ದಾರೆ. ಅಲ್ಲದೆ ಮೂರು ಮರಿಗಳ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಕುನೋ ರಾಷ್ಟ್ರೀಯ ಉದ್ಯಾನವನವು ಮೂವರು ಹೊಸ ಸದಸ್ಯರನ್ನು ಸ್ವಾಗತಿಸಿರುವ ಸುದ್ದಿಯನ್ನು ಹಂಚಿಕೊಳ್ಳಲು ನನಗೆ ಸಂತಸವಾಗುತ್ತಿದೆ. ಆಶಾ ಹೆಸರಿನ ನಮೀಬಿಯಾ ಚೀತಾಗೆ ಮೂರು ಮರಿಗಳು ಜನಿಸಿವೆ ಎಂದು ಸಚಿವರು ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ- ಇಡಿ ಮೂರನೇ ಸಮನ್ಸ್‌ಗೂ ಜಗ್ಗದ ಕೇಜ್ರಿವಾಲ್

ಕೇಂದ್ರ ಸರ್ಕಾರದ ಚೀತಾ ಪ್ರಾಜೆಕ್ಟ್​ ಅಡಿಯಲ್ಲಿ ನಮೀಬಿಯಾದಿಂದ (Namibian cheetah) ಭಾರತಕ್ಕೆ ಇದನ್ನು ಕರೆತರಲಾಗಿತ್ತು. ಇದೀಗ ಚೀತಾ ಪ್ರಾಜೆಕ್ಟ್​ನಲ್ಲಿ ತೊಡಗಿಸಿಕೊಂಡಿರುವ ಅಧಿಕಾರಿಗಳಿಗೆ ಮತ್ತು ತಜ್ಞರಿಗೆ ಅಭಿನಂದನೆಗಳನ್ನು ಸಹ ಸಲ್ಲಿಸಿದ್ದಾರೆ. ಅಲ್ಲದೆ ಪರಿಸರ ಸಮತೋಲನವನ್ನು ಮರುಸ್ಥಾಪಿಸಲು ಪ್ರಧಾನಿ ನರೇಂದ್ರ ಮೋದಿಯವರು ರೂಪಿಸಿದ ಚೀತಾ ಯೋಜನೆಗೆ ಯಶಸ್ಸು ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಮತ್ತೊಂದು ಚೀತಾ ಜ್ವಾಲಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ ಒಂದು ಮರಿ ಮಾತ್ರ ಬದುಕುಳಿದಿತ್ತು.

Share This Article