Connect with us

Bengaluru City

ಸಿಕ್ಕಾಕೊಂಡ್ರರೆ ನಾವು ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ- ಆಸ್ಪತ್ರೆಯಲ್ಲಿ ನಟಿ ರಾಗಿಣಿ ಕಿರಿಕ್

Published

on

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡಲು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಅವರು ಮಾಡಿದ ಕಿರಿಕ್ ಕಾರಣ ಎನ್ನಲಾಗಿದೆ.

ವಿಚಾರಣೆ ಸಂದರ್ಭದಲ್ಲಿ ಪದೇ ಪದೇ ಅನಾರೋಗ್ಯ ನೆಪವೊಡ್ಡುತ್ತಿದ್ದ ಅವರ ಆರೋಗ್ಯ ತಪಾಸಣೆ ನಡೆಸಲು ನಗರದ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿತ್ತು. ಆ ಬಳಿಕ ಅವರನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ನ್ಯಾಯಾಲಯದ ಅನುಮತಿ ಪಡೆದು ರಾಗಿಣಿ ಅವರಿಗೆ ಡೋಪಿಂಗ್ ಪರೀಕ್ಷೆ ನಡೆಸಲು ಮುಂದಾಗಿದ್ದರು. ಆದರೆ ಈ ವೇಳೆ ಅಧಿಕಾರಿಗಳ ವಿರುದ್ಧವೇ ಗರಂ ಆದ ನಟಿ ವೈದ್ಯಕೀಯ ಪರೀಕ್ಷೆ ನಡೆಸಿಕೊಳ್ಳಲು ನಿರಾಕರಿಸಿದ್ದರು. ಈ ಕುರಿತ ವಿಡಿಯೋ ಸದ್ಯ ವೈರಲ್ ಆಗಿದೆ. ಇದನ್ನೂ ಓದಿ: ಸಾಂತ್ವನ ಕೇಂದ್ರದಲ್ಲಿ ಗಲಾಟೆ, ಪೊಲೀಸ್ ವಾಹನದಲ್ಲಿ ಮಾತುಕತೆ – ಇದು ರಾಗಿಣಿ, ಸಂಜನಾ ಫ್ರೆಂಡ್‍ಶಿಪ್

ವಿಡಿಯೋದಲ್ಲಿ ಅಧಿಕಾರಿಗಳ ಗಲಾಟೆ ಮಾಡಿದ್ದು, ನಮ್ಮ ಲೈಫ್ ಈಗಾಗಲೇ ಹಾಳಾಗಿ ಹೋಗಿದೆ. ನೀವು ಬಂದನ ಮಾಡಿದ ಕಾರಣ ನಮ್ಮ ಮರ್ಯಾದೆ ಹೋಗಿದೆ. ಮೊದಲೇ ನಮ್ಮ ಲೈಪ್ ಬರ್ನ್ ಆಗಿದೆ. ಇದರಲ್ಲಿ ಸಿಕ್ಕಿಹಾಕ್ಕೋಂಡ್ರೆ ಜೈಲಿಗೆ ಹೋಗಬೇಕಾಗುತ್ತೆ ಎಂದು ಪರೀಕ್ಷೆ ಮಾಡಿಸಿಕೊಳ್ಳುವ ವಿಚಾರದಲ್ಲಿ ಹಠ ಮಾಡಿದ್ದರು. ಯಾವುದೇ ಟೆಸ್ಟ್ ಮಾಡೋದಿದ್ದರೂ ನಮ್ಮ ವಕೀಲರು ಬರಲಿ ಎಂದು ಹೇಳಿದ್ದರು. ಸದ್ಯ ಈ ವಿಡಿಯೊ ವೈರಲ್ ಆಗಿದೆ. ಇದನ್ನೂ ಓದಿ: ನಟಿ ಸಂಜನಾ ಸೇರಿ ಉಳಿದ ಆರೋಪಿಗಳೂ 3 ದಿನ ಸಿಸಿಬಿ ಕಸ್ಟಡಿಗೆ

ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರ್ ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದನ್ನೂ ಓದಿ: ಮತ್ತೆ 3 ದಿನ ಸಿಸಿಬಿ ಕಸ್ಟಡಿಗೆ ನಟಿ ರಾಗಿಣಿ

ಆದರೆ ರಾಗಿಣಿ ಪರ ವಕೀಲರು ತಮ್ಮ ವಾದ ಮಂಡಿಸಿ, ಈಗಾಗಲೇ 8 ದಿನ ಪೊಲೀಸ್ಟ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದಲ್ಲಿ ರಕ್ತ ಮಾದರಿಯ ಪರೀಕ್ಷೆ ಬಿಟ್ಟು ಬೇರೆ ಯಾವುದೇ ಪ್ರಗತಿ ಮಾಡಿಲ್ಲ. ನನ್ನ ಕಕ್ಷಿದಾರರು ಈಗಾಗಲೇ ತಮಗೇ ತಿಳಿದಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಆದ್ದರಿಂದ ಅವರನ್ನು ನ್ಯಾಯಾಂಗ ಬಂಧನ ನೀಡಿ ಎಂದು ಮನವಿ ಮಾಡಿದ್ದರು. ಆದರೆ ನಟಿಯರು ತಮ್ಮ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಸಿಸಿಬಿ ಪೊಲೀಸರು ವೈದ್ಯಕೀಯ ತಪಾಸಣೆ ವೇಳೆ ಮಾಡಿದ್ದ ಕಿರಿಕ್ ವಿಡಿಯೋವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿಯೇ ಮತ್ತೆ ಮೂರು ದಿನಗಳ ಕಾಲ ಎಲ್ಲಾ ಆರೋಪಿಗಳನ್ನು ಸಿಸಿಬಿ ಕಸ್ಟಡಿಗೆ ಕೋರ್ಟ್ ನೀಡಿದೆ ಎಂಬ ಮಾಹಿತಿ ಲಭಿಸಿದೆ.

Click to comment

Leave a Reply

Your email address will not be published. Required fields are marked *