ಭೋಪಾಲ್: ಉಜ್ಜಯಿನಿಯ ದೇವಸ್ಥಾನದ ಆವರಣದಲ್ಲಿ ಇನ್‍ಸ್ಟಾಗ್ರಾಮ್ ರೀಲ್ ( Instagram reel) ಮಾಡಿದ್ದ ಯುವತಿಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಧ್ಯಪ್ರದೇಶದ (Madhya Pradesh) ಗೃಹ ಸಚಿವ ನರೋತ್ತಮ್ ಮಿಶ್ರಾ (Home Minister Narottam Mishra) ಸೂಚಿಸಿದ್ದಾರೆ.
Advertisement
ಉಜ್ಜಯಿನಿಯ ಮಹಾಕಾಲ್ ದೇವಸ್ಥಾನದ ಗರ್ಭಗುಡಿ ಮತ್ತು ದೇವಸ್ಥಾನದ ಆವರಣದಲ್ಲಿ ಬಾಲಿವುಡ್ ಹಾಡಿಗೆ ಯುವತಿಯೊಬ್ಬಳು ಇನ್‍ಸ್ಟಾಗ್ರಾಮ್ ರೀಲ್ಸ್ ಮಾಡಿದ್ದಳು. ನಂತರ ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಳು. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ನರೋತ್ತಮ್ ಮಿಶ್ರಾ ಅವರ ಗಮನಕ್ಕೆ ಬಂದಿದೆ.
Advertisement
Advertisement
ಈ ಸಂಬಂಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮತ್ತು ಎಸ್‍ಪಿಗೆ ಸೂಚಿಸಿದ್ದೇನೆ. ಅಲ್ಲದೇ ಯಾವುದೇ ರೀತಿಯ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟಾಗುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 7 ತಿಂಗಳು ಕಳೆದರೂ ಸ್ಮಾರ್ಟ್, ಹೈಟೆಕ್ ಮೀನು ಮಾರುಕಟ್ಟೆಗೆ ಸಿಕ್ಕಿಲ್ಲ ಉದ್ಘಾಟನೆ ಭಾಗ್ಯ
Advertisement
ಯುವತಿ ಮಹಾಕಾಲ್ ದೇವಸ್ಥಾನದ ಗರ್ಭಗುಡಿಯಲ್ಲಿ ಜಲಾಭಿಷೇಕ ಮಾಡುವುದನ್ನು ರೀಲ್ಸ್ ಮಾಡಿದ್ದಳು. ಅಲ್ಲದೇ ದೇವಸ್ಥಾನದ ಆವರಣದಲ್ಲಿ ಸುತ್ತುತ್ತಾ ರೀಲ್ಸ್ ಮಾಡಿರುವುದನ್ನು ಕಾಣಬಹುದಾಗಿದೆ. ಈ ಎರಡು ವೀಡಿಯೋಗಳನ್ನು ಮತ್ತೋರ್ವ ಯುವತಿ ಚಿತ್ರೀಕರಿಸಿದ್ದಾಳೆ. ಇದನ್ನೂ ಓದಿ: ಕಾಲ್ಕೆರೆಯುತ್ತಾ ಜಗಳಕ್ಕೆ ಬಂದವನನ್ನು ಚಲಿಸುತ್ತಿದ್ದ ರೈಲಿನಿಂದ ಹೊರ ತಳ್ಳಿದ ಸಹ ಪ್ರಯಾಣಿಕ
ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಯುವತಿಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾಕಾಲ್ ದೇವಸ್ಥಾನದ ಅರ್ಚಕ ಮಹೇಶ್ ಗುರು ಒತ್ತಾಯಿಸಿದ್ದಾರೆ. ಈ ವೀಡಿಯೋ ಅವಹೇಳನಕಾರಿ ಮತ್ತು ಸನಾತನ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಈ ರೀತಿಯ ವೀಡಿಯೊವು ದೇವಾಲಯದ ಪಾವಿತ್ರ್ಯತೆಯನ್ನು ಹಾಳುಮಾಡಿದೆ. ಮಹಾಕಾಲ್ ದೇವಾಲಯದ ನೌಕರರು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.