ನವದೆಹಲಿ: ಇಷ್ಟು ದಿನ ಕುರ್ತಾ, ಪೈಜಾಮಾದಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇದೀಗ ದಕ್ಷಿಣ ಭಾರತದ ಉಡುಗೆ ಪಂಚೆಯಲ್ಲಿ (Lungi) ಮಿಂಚಿದ್ದಾರೆ.
ಹೌದು. ಮೋದಿಯವರು ಸದ್ಯ ಪಂಚೆ ಧರಿಸುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ. ದೆಹಲಿಯ ರಾಜ್ಯ ಸಚಿವ ಎಲ್ ಮುರುಗನ್ (L Murugan) ಅವರ ನಿವಾಸದಲ್ಲಿನಡೆದ ಪೊಂಗಲ್ ಆಚರಣೆಯಲ್ಲಿ ಭಾಗವಹಿಸಲು ಪ್ರಧಾನಿಯವರು ದಕ್ಷಿಣ ಭಾರತದ ಪಂಚೆಯನ್ನು ಧರಿಸಿದ್ದರು. ಸದ್ಯ ನರೇಂದ್ರ ಮೋದಿಯವರು ಪೊಂಗಲ್ (Pongal) ಆಚರಣೆಯ ವಿಧಿ-ವಿಧಾನಗಳನ್ನು ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Advertisement
#WATCH | Prime Minister Narendra Modi takes part in the #Pongal celebrations at the residence of MoS L Murugan in Delhi.
Puducherry Lt Governor and Telangana Governor Tamilisai Soundararajan also present here. pic.twitter.com/rmXtsKG0Vw
— ANI (@ANI) January 14, 2024
Advertisement
ವೀಡಿಯೋದಲ್ಲಿ ಏನಿದೆ..?: ಪ್ರಧಾನಿ ಎಡ ಭುಜದ ಮೇಲೆ ಶಾಲು ಹೊದ್ದು, ಕಪ್ಪು ಕೋಟ್ ಜೊತೆಗೆ ಬಿಳಿ ಪಂಚೆ ಧರಿಸಿರುವುದನ್ನು ವೀಡಿಯೋದಲ್ಲಿ ಕಾಣಬಹುದು. ಅಲ್ಲದೆ ಒಲೆಯ ಮೇಲಿದ್ದ ಪಾತ್ರೆಗೆ ಏನೋ ಹಾಕುತ್ತಿರುವುದನ್ನು ಕೂಡ ಗಮನಿಸಬಹುದು. ಇದಾದ ಬಳಿಕ ಮಂಟಪದೊಳಗೆ ನಿಂತಿರುವ ಹಸುವಿನ ಕಡೆಗೆ ಹೋಗುತ್ತಾರೆ. ಹಸುವಿನ ಮೇಲೆ ಹೂವು ಹಾಕಿ ಅದಕ್ಕೆ ತಿನ್ನಿಸುವುದನ್ನು ಕೂಡ ವೀಡಿಯೋದಲ್ಲಿ ಕಾಣಬಹುದಾಗಿದೆ. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿಯವರು ಸಮಸ್ತ ಜನತೆಗೆ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
Advertisement
Advertisement
ಇದೇ ವೇಳೆ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಸಹ MoS ಮುರುಗನ್ ಅವರ ನಿವಾಸದಲ್ಲಿ ಉಪಸ್ಥಿತರಿದ್ದರು.
ಒಟ್ಟಿನಲ್ಲಿ ಪ್ರಧಾನಿ ಪಂಚೆ ಧರಿಸಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುತ್ತಿರುವುದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸಿದ್ದು, ಬಳಿಕ ಅದನ್ನು ಸೋಶಿಯಲ್ ಮೀಡಿಯಾಕ್ಕೆ ಹರಿಯಲು ಬಿಟ್ಟಿದ್ದಾರೆ.