ಬೀಜಿಂಗ್: ಸಾಮಾನ್ಯವಾಗಿ ಮೊಬೈಲ್ ಬ್ಲಾಸ್ಟ್ ಆಗಿರುವ ಸುದ್ದಿ ಕೇಳಿರ್ತೀರ. ಆದರೆ ಚೀನಾದ ಕೆಫೆಯೊಂದರಲ್ಲಿ ಫ್ರಿಡ್ಜ್ ವೊಂದು ಸ್ಫೋಟಗೊಂಡ ಘಟನೆ ನಡೆದಿದೆ.
ಮಾರ್ಚ್ 19ರಂದು ಚೀನಾದ ಪಿಂಗ್‍ದಿನ್‍ಶಾನ್ ಸಿಟಿಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಫೋಟದ ದೃಶ್ಯ ಸೆರೆಯಾಗಿದೆ. ಈ ವಿಡಿಯೋವನ್ನು ಇದೀಗ ಇಲ್ಲಿನ ಮಾಧ್ಯಮವೊಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ.
Advertisement
ಚೀನಾದ ಇಂಟರ್ ನೆಟ್ ಕೆಫೆಯೊಂದರಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯಾವಳಿಗಳು ಸೆರೆಯಾಗಿ ಇದೀಗ ವಿಡಿಯೋ ವೈರಲ್ ಆಗಿದೆ. ಈ ಘಟನೆಯಲ್ಲಿ ಕೆಫೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಹಾನಿ ಆಗಿಲ್ಲ ಎಂದು ವರದಿಯಾಗಿದೆ.
Advertisement
Advertisement
ಈ ವಿಡಿಯೋ ಸುಮಾರು 30 ಸೆಕೆಂಡ್‍ಗಳಿದ್ದು, ಗ್ರಾಹಕರೊಬ್ಬರು ಕ್ಯಾಶ್ ಕೌಂಟರ್ ಬಳಿ ನಡೆದುಕೊಂಡು ಹೋಗುವಾಗ ಆತನ ಹಿಂದೆ ಇದ್ದ ಫ್ರಿಡ್ಜ್ ಸ್ಫೋಟಗೊಂಡಿದೆ. ಬೆಂಕಿ ಹೊತ್ತಿಕೊಂಡು ಫ್ರಿಡ್ಜ್ ಸ್ಫೋಟವಾಗುತ್ತಿದ್ದಂತೆ ಅಲ್ಲಿದ್ದ ಗ್ರಾಹಕರು ಓಡಿ ಹೋಗಿದ್ದಾರೆ.
Advertisement
ಸದ್ಯ ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.