ಪುಶ್ ಅಪ್ ಮಾಡಿ ಯೋಧರ ಕುಟುಂಬಗಳ ನೆರವಿಗೆ 15 ಲಕ್ಷ ದೇಣಿಗೆ ಸಂಗ್ರಹಿಸಿದ ಸಚಿನ್

Public TV
1 Min Read
sachin tendulkar

ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ನೆರವು ನೀಡಲು ಕಾರ್ಯಕ್ರಮವನ್ನು ಆಯೋಜಿಸಿ ಮೊದಲ ದಿನವೇ 15 ಲಕ್ಷ ರೂ. ಹಣ ಸಂಗ್ರಹ ಮಾಡಿದ್ದಾರೆ.

ದೆಹಲಿಯ ಮ್ಯಾರಾಥಾನ್ ನಲ್ಲಿ ಚಾಲನೆ ನೀಡಲು ಆಗಮಿಸಿದ್ದ ಸಚಿನ್ ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ 10 ಪುಶ್ ಅಪ್ ಮಾಡುವ ಕಿಪ್‍ಮೂವಿಂಗ್ ಪುಶ್ ಅಪ್ ಅಭಿಯಾನಕ್ಕೆ ಚಾಲನೆ ನೀಡಿದರು. ಅಲ್ಲದೇ ಎಲ್ಲರೂ ಈ ಚಾಲೆಜ್ ಸ್ವೀಕರಿಸಬೇಕು ಎಂದು ಮನವಿ ಮಾಡಿದರು.

sachin

ಕಾರ್ಯಕ್ರಮದಲ್ಲಿ ಜನರಿಂದ ಸಂಗ್ರಹಿಸಿದ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಸಿಕೊಳ್ಳಲಾಗುವುದು. ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಕ್ಕೆ ನೆರವು ನೀಡಲಾಗುತ್ತದೆ. ನಮ್ಮ ಕಾರ್ಯಕ್ರಮದ ಉದ್ದೇಶವನ್ನು ಅರ್ಥೈಸಿಕೊಂಡು ಬೆಂಬಲ ನೀಡುವುದಾಗಿ ನನಗೆ ನಂಬಿಕೆ ಇದೆ ಎಂದು ಸಚಿನ್ ವಿಶ್ವಾಸ ವ್ಯಕ್ತಪಡಿಸಿದರು.

ಉಳಿದಂತೆ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಮಕ್ಕಳು, ಯುವಕ, ಯುವತಿಯರು, ಹಿರಿಯರು ಸೇರಿದಂತೆ ಎಲ್ಲಾ ವಯೋಮಾನದವರು ಭಾಗವಹಿಸಿದ್ದರು. ಸಚಿನ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪುಶ್ ಅಪ್ ಮಾಡುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಧನ್ಯವಾದ ತಿಳಿಸಿದ್ದಾರೆ.

https://www.instagram.com/p/BuSqf2OFFOv/?utm_source=ig_web_copy_link

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article