ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿ ವಿಡಿಯೋ ಅಪ್ಲೋಡ್ ಮಾಡಿದ್ದು, ಈ ವಿಡಿಯೋ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಶುರು ಮಾಡಿದ ‘ಹಮ್ ಫಿಟ್ ತೋ ಇಂಡಿಯಾ ಫಿಟ್ ಚಾಲೆಂಜ್’ನನ್ನು ಸಲ್ಮಾನ್ ಖಾನ್ ಇತ್ತೀಚಿಗೆ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಅವರ ಚಾಲೆಂಜ್ ಸ್ವೀಕರಿಸಿದ ಸಲ್ಮಾನ್ ತಮ್ಮ ಫಿಟ್ನೆಸ್‍ವನ್ನು ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
Advertisement
ವಿಡಿಯೋದಲ್ಲಿ ಸಲ್ಮಾನ್ ಖಾನ್ ಜಿಮ್‍ನಲ್ಲಿ ಬೆವರಿಸಿಳಿದ್ದಾರೆ. ಅಲ್ಲದೇ ಸೈಕಲ್ ರೈಡ್ ಕೂಡ ಮಾಡಿದ್ದಾರೆ. ಕ್ರೀಡಾ ಸಚಿವರಾದ ರಾಥೋಡ್ ಹಮ್ ಫಿಟ್ ತೋ ಇಂಡಿಯಾ ಫಿಟ್ ಎನ್ನುವ ಅದ್ಭುತ ಕ್ಯಾಂಪೇನ್ ಶುರು ಮಾಡಿದ್ದಾರೆ. ಸದ್ಯ ನಾನು ಕಿರಣ್ ರಿಜೂಜು ಅವರ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
Advertisement
ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22 ರಂದು, “ನಾನು ಫಿಟ್ ಆದ್ರೆ ದೇಶ ಫಿಟ್ ನೀವು ನಿಮ್ಮ ಫಿಟ್ನೆಸ್ ಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡಿ” ಎಂದು ಕೊಹ್ಲಿ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ನಟ ಹೃತಿಕ್ ರೋಷನ್ ಅವರಿಗೆ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.
Advertisement
ಈ ಚಾಲೆಂಜ್ ಅನ್ನು ಸ್ವೀಕರಿಸಿದ ಕಲಾವಿದರು ತಮ್ಮ ಫಿಟ್ನೆಸ್ ವಿಡಿಯೋ ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿದ್ದರು. ಸದ್ಯ ಈಗ ಸಲ್ಮಾನ್ ಖಾನ್ ತಮ್ಮ ಫಿಟ್ನೆಸ್ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು, ವಿಡಿಯೋ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Fabulous campaign by sports minister @Ra_THORe on #HumFitTohIndiaFit. I accept #FitnessChallenge of @KirenRijiju ????. Here is my video … pic.twitter.com/yVvjwHDeSm
— Salman Khan (@BeingSalmanKhan) August 11, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews