ನವದೆಹಲಿ: ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿನ (IIT) ವಾಶ್ ರೂಂನಲ್ಲಿ (Washroom) ವಿದ್ಯಾರ್ಥಿನಿಯರ ವೀಡಿಯೋ (Video) ಮಾಡಿರುವ ಆರೋಪದ ಮೇಲೆ 20 ವರ್ಷದ ಸ್ವೀಪರ್‌ನನ್ನು ಬಂಧಿಸಲಾಗಿದೆ.
ದೆಹಲಿ ವಿಶ್ವವಿದ್ಯಾಲಯದ ಭಾರ್ತಿ ಕಾಲೇಜಿನ ಸುಮಾರು 10 ವಿದ್ಯಾರ್ಥಿನಿಯರು ಕಾಲೇಜಿನ ಫೆಸ್ಟ್ ಸಮಯದಲ್ಲಿ ಫ್ಯಾಷನ್ ಶೋಗಾಗಿ ವಾಶ್ ರೂಂನಲ್ಲಿ ಬಟ್ಟೆ ಬದಲಾಯಿಸುತ್ತಿದ್ದ ಸಂದರ್ಭದಲ್ಲಿ ರಹಸ್ಯವಾಗಿ ತಮ್ಮ ವೀಡಿಯೋ ಮಾಡಿರುವುದಾಗಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ವಿದ್ಯಾರ್ಥಿನಿಯರು ಕಾಲೇಜು ಆಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿದ ಬಳಿಕವೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ನಂತರ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಸಿ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಟಾಕಿ ದುರಂತ ಸ್ಥಳಕ್ಕೆ ಡಿಕೆಶಿ ಭೇಟಿ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
Advertisement
Advertisement
ಐಐಟಿ ದೆಹಲಿಯ ವಾಶ್ ರೂಂನಲ್ಲಿ ಹುಡುಗನೊಬ್ಬ ವೀಡಿಯೋ ಮಾಡಿರುವ ಬಗ್ಗೆ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ಎಕ್ಸ್ ಮೂಲಕ ದೂರನ್ನು ಸ್ವೀಕರಿಸಿದ್ದೇವೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 354 ಸಿ ಅಡಿಯಲ್ಲಿ ಶನಿವಾರ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರಕ್ಕೆ ಇಂದು ಕೊನೆಯ ದಿನ – ಬನ್ನಿ ಪಾಲ್ಗೊಳ್ಳಿ
Web Stories