– ಹಲ್ಲೆಗೊಂಡ ಯುವಕ ಸಾವು, ಆರೋಪಿಗಳು ಅರೆಸ್ಟ್
ಬೀದರ್: ಯುವಕನೊಬ್ಬ ವಿವಾಹಿತೆಯ ಜೊತೆ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಆತನ ಕೈ-ಕಾಲು ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೀದರ್ (Bidar) ಜಿಲ್ಲೆ ಔರಾದ್ (Aurad) ತಾಲೂಕಿನ ನಾಗನಪಲ್ಲಿ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೃತ ಯುವಕನನ್ನು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆ ಗೌಣಗಾಂವ್ ಗ್ರಾಮದ ವಿಷ್ಣು (27) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಲಕ್ಷದ್ವೀಪ ಸಮೀಪ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ
ಮೃತ ವಿಷ್ಣು ಕಳೆದ ಒಂದು ವರ್ಷದಿಂದ ನಾಗನಪಲ್ಲಿ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನಂತೆ. ಅ.21ರಂದು ತನ್ನ ಇಬ್ಬರು ಸ್ನೇಹಿತರೊಂದಿಗೆ ಮಹಿಳೆಯ ಮನೆಗೆ ಹೋಗಿದ್ದ ವೇಳೆ ಮಹಿಳೆಯ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಯುವಕನ ಕೈ-ಕಾಲು ಕಟ್ಟಿ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಹಲ್ಲೆ ನಡೆಸಿರುವುದು ಗೊತ್ತಾಗಿದೆ.
ಹಲ್ಲೆಗೊಳಗಾದ ಯುವಕನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಗನನ್ನು ಕೊಲೆ ಮಾಡುವ ಉದ್ದೇಶದಿಂದ ಥಳಿಸಿರುವುದಾಗಿ ಮೃತ ವಿಷ್ಣು ತಾಯಿ ಲಕ್ಷ್ಮೀಯಿಂದ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಅಕ್ರಮ ಸಂಬಂಧ ಶಂಕೆಯಿರುವ ಮಹಿಳೆ ಪೂಜಾ ಎಂಬಾಕೆಯಿಂದ ಪ್ರತಿದೂರು ದಾಖಲಾಗಿದೆ.
ಸದ್ಯ ಹಲ್ಲೆ ನಡೆಸಿದ ಮಹಿಳೆಯ ತಂದೆ ಅಶೋಕ್ & ಮಹಿಳೆಯ ಸಹೋದರ ಗಜಾನನ ಇಬ್ಬರನ್ನು ಚಿಂತಾಕಿ ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ‘ಮೋಂಥಾ’ ಸೈಕ್ಲೋನ್ ಅಬ್ಬರ – ಚೆನ್ನೈನಲ್ಲಿ ಭಾರೀ ಮಳೆ ಸಾಧ್ಯತೆ

