ಮಂಗಳೂರು: ಬೆಂಕಿ ಹಚ್ಚಿದರೆ ಬಾವಿ ನೀರು ಉರಿಯುವ ವಿಲಕ್ಷಣ ಘಟನೆ ಮಂಗಳೂರಿನ ದೇರಳಕಟ್ಟೆಯಲ್ಲಿ ಕಂಡು ಬಂದಿದೆ. ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಸಮೀಪದ ಕಾನಕೆರೆ ಎಂಬಲ್ಲಿ ಈ ಘಟನೆ ನಡೆಯುತ್ತಿದೆ.
ಕಾನಕೆರೆಯ ನಾಲ್ಕು ಬಾವಿಗಳ ನೀರಿನಲ್ಲಿ ಪೆಟ್ರೋಲಿಯಂ ಅಂಶ ಕಂಡು ಬರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಾನಕೆರೆ ಪ್ರದೇಶ ಜನವಸತಿ ಹೊಂದಿದ್ದು, ಇಲ್ಲಿ ಹಲವು ತೆರೆದ ಬಾವಿಗಳಿವೆ. ಈ ಪೈಕಿ ನಾಲ್ಕು ಬಾವಿಗಳಲ್ಲಿನ ನೀರು ಪೆಟ್ರೋಲ್ ವಾಸನೆಯಿಂದ ಕೂಡಿದ್ದು, ಬೆಂಕಿ ಕೊಟ್ಟರೆ ಹೊತ್ತಿ ಉರಿಯುತ್ತಿದೆ.
Advertisement
Advertisement
ಕಳೆದ ಎರೆಡು ದಿನಗಳಿಂದ ಇಂತಹ ಪ್ರಕರಣ ನಡೆಯುತ್ತಿದ್ದರೂ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ರಾತ್ರಿ ಬಾವಿಗಳನ್ನು ಪರಿಶೀಲಿಸಿದಾಗ ಇದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದರೂ ರಾತ್ರಿಯವರೆಗೆ ಅಗ್ನಿಶಾಮಕ ದಳ ಇತ್ತ ಆಗಮಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Advertisement
ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಪಂಪ್‍ನ ತೈಲ ಬಾವಿ ಲೀಕೇಜ್ ಆಗಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.
Advertisement
https://www.youtube.com/watch?v=uE3r9qZoJWk&feature=youtu.be
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv