Tuesday, 26th March 2019

ಬೆಂಕಿ ಹಚ್ಚಿದರೆ ಉರಿಯುತ್ತಿದೆ ಬಾವಿ ನೀರು!

ಮಂಗಳೂರು: ಬೆಂಕಿ ಹಚ್ಚಿದರೆ ಬಾವಿ ನೀರು ಉರಿಯುವ ವಿಲಕ್ಷಣ ಘಟನೆ ಮಂಗಳೂರಿನ ದೇರಳಕಟ್ಟೆಯಲ್ಲಿ ಕಂಡು ಬಂದಿದೆ. ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಸಮೀಪದ ಕಾನಕೆರೆ ಎಂಬಲ್ಲಿ ಈ ಘಟನೆ ನಡೆಯುತ್ತಿದೆ.

ಕಾನಕೆರೆಯ ನಾಲ್ಕು ಬಾವಿಗಳ ನೀರಿನಲ್ಲಿ ಪೆಟ್ರೋಲಿಯಂ ಅಂಶ ಕಂಡು ಬರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಾನಕೆರೆ ಪ್ರದೇಶ ಜನವಸತಿ ಹೊಂದಿದ್ದು, ಇಲ್ಲಿ ಹಲವು ತೆರೆದ ಬಾವಿಗಳಿವೆ. ಈ ಪೈಕಿ ನಾಲ್ಕು ಬಾವಿಗಳಲ್ಲಿನ ನೀರು ಪೆಟ್ರೋಲ್ ವಾಸನೆಯಿಂದ ಕೂಡಿದ್ದು, ಬೆಂಕಿ ಕೊಟ್ಟರೆ ಹೊತ್ತಿ ಉರಿಯುತ್ತಿದೆ.

ಕಳೆದ ಎರೆಡು ದಿನಗಳಿಂದ ಇಂತಹ ಪ್ರಕರಣ ನಡೆಯುತ್ತಿದ್ದರೂ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ರಾತ್ರಿ ಬಾವಿಗಳನ್ನು ಪರಿಶೀಲಿಸಿದಾಗ ಇದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದರೂ ರಾತ್ರಿಯವರೆಗೆ ಅಗ್ನಿಶಾಮಕ ದಳ ಇತ್ತ ಆಗಮಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಪಂಪ್‍ನ ತೈಲ ಬಾವಿ ಲೀಕೇಜ್ ಆಗಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply

Your email address will not be published. Required fields are marked *