Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟುಂಬ ರಾಜಕಾರಣ, ಬಣ ರಾಜಕೀಯಕ್ಕೆ ಬ್ರೇಕ್ – ಹೈಕಮಾಂಡ್‌ನಿಂದ ಎಚ್ಚರಿಕೆ ಸಂದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಟುಂಬ ರಾಜಕಾರಣ, ಬಣ ರಾಜಕೀಯಕ್ಕೆ ಬ್ರೇಕ್ – ಹೈಕಮಾಂಡ್‌ನಿಂದ ಎಚ್ಚರಿಕೆ ಸಂದೇಶ

Bengaluru City

ಕುಟುಂಬ ರಾಜಕಾರಣ, ಬಣ ರಾಜಕೀಯಕ್ಕೆ ಬ್ರೇಕ್ – ಹೈಕಮಾಂಡ್‌ನಿಂದ ಎಚ್ಚರಿಕೆ ಸಂದೇಶ

Public TV
Last updated: May 24, 2022 7:37 pm
Public TV
Share
2 Min Read
bjp - congress
SHARE

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನಡೆಯುವ ಚುನಾವಣೆಗೆ ಬಿಜೆಪಿ -ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಉಭಯ ಪಕ್ಷಗಳಲ್ಲಿ ಯಾರಿಗೆ ಮೇಲುಗೈ-ಯಾರಿಗೆ ಹಿನ್ನಡೆ ಅನ್ನುವ ಚರ್ಚೆ ಆರಂಭವಾಗಿದೆ.

ಗೆಲ್ಲಲು ಅವಕಾಶ ಇರುವ ನಾಲ್ಕು ಸ್ಥಾನಗಳಿಗೆ ಬಿಜೆಪಿ ಇಂದು ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರೆ ಕಾಂಗ್ರೆಸ್ ನಿನ್ನೆ ಸಂಜೆ ಪಟ್ಟಿ ಬಿಡುಗಡೆ ಮಾಡಿತ್ತು. ಬಿಜೆಪಿಯ ಅಭ್ಯರ್ಥಿಯಾಗಲಿದ್ದಾರೆಂದೇ ನಿರೀಕ್ಷೆ ಇದ್ದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಟಿಕೆಟ್ ನಿರಾಕರಿಸಿ ವರಿಷ್ಠರು ಅಚ್ಚರಿ ಮೂಡಿಸಿದ್ದಾರೆ.

ಬಿಜೆಪಿ ಭವಿಷ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡಲ್ಲ ಎನ್ನುವ ಸಂದೇಶ ರವಾನಿಸಿದೆ. ಇತ್ತೀಚೆಗೆ ಜೈಪುರದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡಲ್ಲ ಎನ್ನುವ ಸಂದೇಶ ರವಾನಿಸಿದ್ದರು. ಅದರಂತೆ ರಾಜ್ಯದ ಎಲ್ಲಾ ನಾಯಕರ ಲೆಕ್ಕಾಚಾರ ತಲೆಕೆಳಗಾಗುವಂತೆ ಮಾಡಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

modiji 1

ಅದೇ ರೀತಿ ಕಾಂಗ್ರೆಸ್ ಹೈಕಮಾಂಡ್ ಕೂಡ ಇಲ್ಲಿಯ ಬಣ ರಾಜಕೀಯದ ಒತ್ತಡಕ್ಕೆ ಸೊಪ್ಪು ಹಾಕದೇ ದಿಟ್ಟ ನಿರ್ಧಾರ ಕೈಗೊಂಡಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ತಮ್ಮ ತಮ್ಮ ಬಣಗಳ ಅಭ್ಯರ್ಥಿಗಳಿಗೆ ಟೆಕೆಟ್ ಕೊಡಿಸಲು ಕಸರತ್ತು ನಡೆಸಿ ವಿಫಲರಾಗಿದ್ದಾರೆ. ಇಬ್ಬರ ಒತ್ತಡಕ್ಕೂ ಸೊಪ್ಪು ಹಾಕದೇ ಹೈಕಮಾಂಡ್ ತನ್ನದೇ ಸಮೀಕರಣದಂತೆ ಅಭ್ಯರ್ಥಿಗಳ ಕಣಕ್ಕಿಳಿಸಲು ನಿರ್ಧರಿಸಿದೆ. ಆ ಮೂಲಕ ಬಣ ರಾಜಕೀಯವನ್ನು ಇದೇ ಹಂತದಲ್ಲಿ ಕೊನೆಗೊಳಿಸುವ ಸಂದೇಶ ರವಾನಿಸಿದೆ. ಇದನ್ನೂ ಓದಿ: ಕಡೇ ಕ್ಷಣದ ಬದಲಾವಣೆ ಮಧ್ಯೆ ಟಿಕೆಟ್ ಘೋಷಣೆ – ಹೈಡ್ರಾಮಾ ಮೂಲಕ ಕಮಲ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಯಾರಿಗೆ ಮೇಲುಗೈ-ಯಾರಿಗೆ ಹಿನ್ನಡೆ?
ಬಿಜೆಪಿಯ ನಾಲ್ಕು ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಯಾರ ಕೈ ಮೇಲಾಗಿದೆ ಎಂಬ ಚರ್ಚೆ ಆರಂಭವಾಗಿದೆ. ನಾಲ್ವರ ಪೈಕಿ ಮೂವರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅಭ್ಯರ್ಥಿಗಳು ಎನ್ನಲಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೇಶವಪ್ರಸಾದ್ ಮತ್ತು ಹೇಮಲತಾ ಅವರ ಆಯ್ಕೆಯಲ್ಲಿ ಸಂತೋಷ್ ಕೈ ಮೇಲಾಗಿದೆ. ಇನ್ನು ನಾರಾಯಣಸ್ವಾಮಿ ಆಯ್ಕೆಯಲ್ಲೂ ಅವರ ಕೈಚಳಕ ನಡೆದಿದೆ ಎನ್ನಲಾಗಿದೆ.

bl santosh

ಇದೇ ವೇಳೆ ತಮ್ಮ ಆಪ್ತರಾದ ಗೀತಾ ವಿವೇಕಾನಂದ, ನಿರ್ಮಲ್ ಸುರಾನಾ , ನಂದೀಶ್, ಸಿದ್ದರಾಜು ಅವರಿಗೆ ಟಿಕೆಟ್ ಕೊಡಿಸಲು ಸಂತೋಷ್ ಅವರಿಗೆ ಸಾಧ್ಯವಾಗಿಲ್ಲವಾದರೂ ಹೆಚ್ಚಿನ ಆಯ್ಕೆಯಲ್ಲಿ ಅವರೇ ಮುನ್ನಡೆ ಸಾಧಿಸಿದ್ದಾರೆ. ಇದರ ಜೊತೆಗೆ ಬಿಎಸ್ ವೈ ಪುತ್ರ ವಿಜಯೇಂದ್ರ ಸೇರಿದಂತೆ ಯಡಿಯೂರಪ್ಪ ಬಣದ ಯಾರಿಗೂ ಅವಕಾಶ ಸಿಕ್ಕಿಲ್ಲ. ಹೀಗಾಗಿ ಬಿಎಸ್‌ವೈಗೆ ಈ ಬಾರಿಯ ಟಿಕೆಟ್ ಹಂಚಿಕೆಯಲ್ಲಿ ಭಾರೀ ಹಿನ್ನಡೆಯಾಗಿದೆ.

ಇದೇ ವೇಳೆ ಪರಿಷತ್ ಟಿಕೆಟ್ ವಂಚಿತ ನಿರ್ಮಲ್ ಸುರಾನಾ ಹಾಗೂ ಗೀತಾ ವಿವೇಕಾನಂದ ಅವರಿಗೆ ರಾಜ್ಯಸಭೆ ಟಿಕೆಟ್ ಕೊಡಿಸಲು ಬಿಎಲ್ ಸಂತೋಷ್ ಪ್ರಯತ್ನ ನಡೆಸಿದ್ದಾರೆ. ಅದೂ ಕೂಡ ಕೈಗೂಡಿದರೆ ಅವರು ರಾಜ್ಯ ಬಿಜೆಪಿ ವಿಚಾರದಲ್ಲಿ ಇನ್ನಷ್ಟು ಪ್ರಬಲರಾಗಿ ಬಿಎಸ್ ವೈ ಬಣದ ಕೆಂಗಣ್ಣಿಗೆ ಗುರಿಯಾಗಲಿದ್ದಾರೆ. ಈ ನಡುವೆ ತಮ್ಮನ್ನು ಕಡೆಗಣಿಸಿ ಟಿಕೆಟ್ ನೀಡಿದ್ದಲ್ಲದೇ, ನಾಮಪತ್ರ ಸಲ್ಲಿಸುವ ವೇಳೆಯೂ ಸೌಜನ್ಯಕ್ಕೂ ಆಹ್ವಾನಿಸದಿರುವುದು ಬಿಎಸ್ ವೈ ಅವರು ಇನ್ನಷ್ಟು ಬೇಸರಗೊಳ್ಳುವಂತೆ ಮಾಡಿದೆ. ಈ ಎಲ್ಲಾ ವಿದ್ಯಮಾನಗಳ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯದ ನಡೆ ಏನು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

TAGGED:bjpcongresselectionpoliticsಕರ್ನಾಟಕಕಾಂಗ್ರೆಸ್ಬಿಜೆಪಿರಾಜಕೀಯವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
5 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
37 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?