ಬೆಂಗಳೂರು: ವಿಧಾನಸಭೆ ಸದಸ್ಯರಿಂದ ಆಯ್ಕೆಯಾಗಿ ವಿಧಾನ ಪರಿಷತ್ 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯು ಪ್ರಮುಖ ರಾಜಕೀಯ ಪಕ್ಷಗಳಿಗೆ ಗೊಂದಲದ ಗೂಡಾಗಿ ಪರಿಣಮಿಸಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ.
ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೇ 24 ಅಂದರೆ ನಾಳೆ ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಒಂದೇ ದಿನ ಬಾಕಿ ಇದೆ. ಆದರೆ ಪ್ರಮುಖ ಎರಡೂ ಪಕ್ಷಗಳು ಈವರೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದ ಸೂಚನೆ ಕಾಣುತ್ತಿಲ್ಲ. ಇದನ್ನೂ ಓದಿ: ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಅಖಾಡಕ್ಕೆ ರಾಕ್ ಲೈನ್ ವೆಂಕಟೇಶ್ : ಉಲ್ಟಾ ಆದ ಲೆಕ್ಕಾಚಾರ
Advertisement
Advertisement
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿದ್ದು, ಹೈಕಮಾಂಡ್ ನಾಯಕ ಭೇಟಿಯಾಗಲಿದ್ದಾರೆ. ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಸಿ ಸಂಜೆ ಹೊತ್ತಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಈ ಸಂಬಂಧ ಮೊನ್ನೆಯಷ್ಟೇ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ್ದರು. ಈ ಪ್ರಮುಖ ನಾಯಕರಲ್ಲಿ ಯಾರ ಬೆಂಬಲಿಗರಿಗೆ ಹೆಚ್ಚು ಮಣೆ ಹಾಕಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
Advertisement
ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ನಾನು ಸೇರಿ ಚರ್ಚೆ ನಡೆಸಿಯೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಿದ್ದೇವೆ. ಇಂದು ಸಂಜೆಯೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್
Advertisement
ಬಿಜೆಪಿಯಲ್ಲೂ ಕೂಡ ಈವರೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ. ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡಲಾಗಿದ್ದರೂ, ಹೈಕಮಾಂಡ್‌ನಿಂದ ಅಧಿಕೃತ ಮುದ್ರೆ ಇನ್ನೂ ಸಿಕ್ಕಿಲ್ಲ. ಪಕ್ಷದಲ್ಲಿ ಯಾರಿಗೆ ಟಿಕೆಟ್ ನೀಡಲಾಗುವುದು ಎಂಬುದು ಕುತೂಹಲ ಮೂಡಿಸಿದೆ.