ನವದೆಹಲಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ವಿಚಾರವನ್ನು ಕುಮಾರಸ್ವಾಮಿ, ಯಡಿಯೂರಪ್ಪ ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಪರಿಷತ್ ಚುನಾವಣೆಯ ಬಗ್ಗೆ ಮೋದಿಯವರ ಬಳಿ ಚರ್ಚೆ ಮಾಡಿದ್ದೇನೆ. ಗೊಂದಲವಾಗದಂತೆ ನಿರ್ಧಾರ ಮಾಡಿ ಎಂದು ಹೇಳಿದ್ದೇನೆ. ಬಿಜೆಪಿಯವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಯಾವಾಗ ಕುಡಿತಾರೋ, ಯಾವಾಗ ಕುಡಿಯಲ್ಲೊ ಗೊತ್ತಿಲ್ಲ: ಕೆ.ಎಸ್.ಈಶ್ವರಪ್ಪ
Advertisement
Advertisement
ಮುಂದಿನ ಚುನಾವಣೆಗೆ ಇದೆ ಮೈತ್ರಿ ಮುಂದುವರಿಯುವ ಬಗ್ಗೆ ಚರ್ಚೆ ನಡೆದಿಲ್ಲ. ಮಲ್ಲಿಕಾರ್ಜುನ ಖರ್ಗೆಯವರಿಗೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಮನಸ್ಸು ಇದೆ. ಆದರೆ ಈ ಮನಸ್ಸು ಬೇರೆ ನಾಯಕರಿಗೆ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಏನಿದೆಯೋ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಬನ್ನಿ ದೇವೇಗೌಡ್ರೇ… ಇಲ್ಲಿ ಕುಳಿತುಕೊಳ್ಳಿ: ಪ್ರಧಾನಿ ಮೋದಿ
Advertisement
ನಾವು ಮೇಲೆ ಬಿದ್ದು ಮೈತ್ರಿ ಮಾಡಿಕೊಳ್ಳಿ ಎಂದು ಹೇಳಲು ಆಗಲ್ಲ. ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಕುಮಾರಸ್ವಾಮಿ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.