ಕೊಪ್ಪಳ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಕೊಪ್ಪಳದ ಬಿಜೆಪಿ ನಾಯಕಿಗೆ ಅಚ್ಚರಿಯ ಅವಕಾಶ ದೊರಕಿದೆ.
ಕೊಪ್ಪಳದ ಹೇಮಲತಾ ಅವರಿಗೆ ಟಿಕೆಟ್ ಫೈನಲ್ ಮಾಡಿದ್ದು, ಬಿಜೆಪಿ ಅಚ್ಚರಿ ನೀಡಿದೆ. ಸಂಸದ ಸಂಗಣ್ಣ ಕರಡಿ ಅವರ ಕಟ್ಟಾ ಬೆಂಬಲಿಗರಾಗಿರುವ ಹೇಮಲತಾ ನಾಯಕ ಅವರು ಸಂಗಣ್ಣ ಕರಡಿ ಅವರು ಬಿಜೆಪಿಗೆ ಬಂದಾಗ ಹೇಮಲತಾ ನಾಯಕ ಸಹ ಬಿಜೆಪಿಗೆ ಬಂದಿದ್ದರು. ಪ್ರಸ್ತುತ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿರುವ ಹೇಮಲತಾ ನಾಯಕ ಅವರು, ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆಯೂ ಆಗಿ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಪರಿಷತ್ ಪಟ್ಟಿ ಪ್ರಕಟ – ಲಕ್ಷ್ಮಣ ಸವದಿಗೆ ಟಿಕೆಟ್
Advertisement
Advertisement
ಸದ್ಯ ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯೆ ಆಗಿರುವ ಹೇಮಲತಾ ಈ ಹಿಂದೆ ಕೊಪ್ಪಳ ನಗರಸಭೆಗೆ ಸ್ಪರ್ಧೆಗೆ ಟಿಕೆಟ್ ಕೇಳಿದ್ದರು. ಆಗ ಬಿಜೆಪಿ ಟಿಕೆಟ್ ಸಿಕ್ಕಿರಲಿಲ್ಲ. ಈ ಹಿಂದೆ ನಗರಸಭೆಯ 18ನೇ ವಾರ್ಡಿಗೆ ಜೆಡಿಎಸ್‍ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ಮೂಲದ ಹೇಮಲತಾ ನಾಯಕ್ ಅವರು ಕೊಪ್ಪಳದಲ್ಲಿ ಸುಮಾರು ಮೂವತ್ತು ವರ್ಷಗಳಿಂದ ವಾಸಿಸುತ್ತಿದ್ದಾರೆ. ಅವರ ಪತಿ ಪರೀಕ್ಷಿತರಾಜ್ ಅವರು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ. ಇದನ್ನೂ ಓದಿ: ವಿಜಯೇಂದ್ರಗೆ ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗುವ ಸುಳಿವು ನೀಡಿದ ಕಟೀಲ್