KarnatakaLatestLeading NewsMain Post

ವಿಧಾನ ಪರಿಷತ್‌ ಚುನಾವಣೆ- 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಚುನಾವಣೆಯಲ್ಲಿ 90 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ.

ಬೆಳಗ್ಗೆ 8ರಿಂದಲೇ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆವರೆಗೂ ನಡೆಯಲಿದೆ. ಒಟ್ಟು 98,846 ಮತದಾರರಿದ್ದಾರೆ. ರಾಜ್ಯದಾದ್ಯಂತ 6,073 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಶಾಸಕರು, ಸಂಸದರು, ಸ್ಥಳೀಯ ಸಂಸ್ಥೆಗಳ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಮತದಾನ ಮಾಡಲಿದ್ದಾರೆ. ಇದೇ ಡಿ.14 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿ ಯುವ ಮುಖಂಡನನ್ನು ಚಾಕುವಿನಿಂದ ಇರಿದು ಕೊಂದ್ರು!

ವಿಧಾನ ಪರಿಷತ್‌ ಚುನಾವಣೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪರಿಷತ್‌ ಸಭಾಪತಿ ಎಂ.ಕೆ.ಪ್ರಾಣೇಶ್‌ ಸೇರಿದಂತೆ ಅನೇಕ ಪ್ರಮುಖರು ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ಕಣದಲ್ಲಿರುವ ಏಕೈಕ ಮಹಿಳೆಯಾಗಿದ್ದಾರೆ.

ರಾಜ್ಯದಲ್ಲಿ ಕನಿಷ್ಠ 12 ರಿಂದ 15 ಸ್ಥಾನ ಗೆಲ್ಲಲಿದ್ದೇವೆ- ಪ್ರತಾಪಸಿಂಹ

ಮಡಿಕೇರಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಇಂದು ಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಕೊಡಗು ಜಿಲ್ಲೆಯಲ್ಲೂ ಒಂದು ಸ್ಥಾನಕ್ಕೆ ಮತದಾನ ನಡೆಯುತ್ತಿದ್ದು, ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಮತ್ತು ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ಮತದಾನ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ-ಬೊಮ್ಮಾಯಿ

ಮತದಾನಕ್ಕೂ ಮುನ್ನ ಶಾಸಕ ಅಪ್ಪಚ್ಚು ರಂಜನ್ ಮತ್ತು ಸಂಸದ ಪ್ರತಾಪಸಿಂಹ ಜೊತೆಗೆ ಮಡಿಕೇರಿ ನಗರಸಭೆ ಬಿಜೆಪಿ ಸದಸ್ಯರು ಕೋಟೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಎಲ್ಲರೂ ಒಟ್ಟಿಗೆ ಬಂದು ನಗರಸಭೆಯ ಕಾವೇರಿ ಕಲಾಕ್ಷೇತ್ರದಲ್ಲಿ ಇರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಬಳಿಕ ಮಾತನಾಡಿದ ಸಂಸದ ಪ್ರತಾಪಸಿಂಹ, ಕೊಡಗಿನಲ್ಲಿ ಅಷ್ಟೇ ಅಲ್ಲ ಮೈಸೂರಿನಲ್ಲೂ ನಮ್ಮ ಅಭ್ಯರ್ಥಿ ಗೆಲ್ಲಲಿದ್ದಾರೆ. ಕೊಡಗಿನಲ್ಲಿ ಇರುವ 1,329 ಮತಗಳ ಪೈಕಿ 1,000 ಮತಗಳ ಪಡೆದು ನಮ್ಮ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲ್ಲಲಿದ್ದಾರೆ. ರಾಜ್ಯದಲ್ಲಿ ಕನಿಷ್ಠ 12 ರಿಂದ 15 ಸ್ಥಾನ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Back to top button