ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ (Power Tariff Hike) ಮಾಡುವುದಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ.
ವಿಧಾನ ಪರಿಷತ್ ಕಲಾಪದ (Vidhan Parishad) ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ (Congress) ನಾಗರಾಜ್ ಯಾದವ್ (Nagaraj Yadav) ವಿಷಯ ಪ್ರಸ್ತಾಪ ಮಾಡಿದ್ರು. ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬರುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯ ಮಾಡಿದರು.
Advertisement
Advertisement
ಇದಕ್ಕೆ ಉತ್ತರ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಇಲ್ಲ. ಸರ್ಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದರು. ಸದ್ಯಕ್ಕೆ ದರ ಏರಿಕೆ ಬಗ್ಗೆ ಯಾವುದೇ ಯೋಚನೆಯೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k