ಬೆಂಗಳೂರು : ಸಿದ್ದರಾಮಯ್ಯರನ್ನು(Siddaramaiah) ಕೋಲಾರದಲ್ಲಿ ಸೋಲಿಸೋಕೆ ಬಿಜೆಪಿ ಜೊತೆ ಒಪ್ಪಂದ ಮಾಡಿಕೊಳ್ಳುವ ಅವಶ್ಯಕತೆ ನಮಗೆ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ(Kolara) ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಮಾಜಿ ಸಿಎಂ ಆದವರು. ಅವರು 224 ಕ್ಷೇತ್ರದಲ್ಲಿ ನಿಲ್ಲಬಹುದು. ನಾವು ಅದಕ್ಕೆ ಲಘುವಾಗಿ ಮಾತನಾಡುವುದಿಲ್ಲ. ನಾವು ನಮ್ಮ ಅಭ್ಯರ್ಥಿಯನ್ನು ಹಾಕಿಯೇ ಹಾಕುತ್ತೇವೆ. ಈಗಾಗಲೇ 6 ತಿಂಗಳ ಹಿಂದೆಯೇ ಅಭ್ಯರ್ಥಿ ಆಯ್ಕೆ ಆಗಿದೆ ಎಂದರು. ಇದನ್ನೂ ಓದಿ: ಕೇಸರಿ ಕಂಡರೆ ಕಾಂಗ್ರೆಸ್‌ಗೆ ಅಲರ್ಜಿ ಯಾಕೆ?- ವಿವೇಕ ಯೋಜನೆ ಸಮರ್ಥನೆ ಮಾಡಿಕೊಂಡ ಸಿಎಂ ಬೊಮ್ಮಾಯಿ
Advertisement
Advertisement
ಸಿದ್ದರಾಮಯ್ಯ ಸೋಲಿಸೋಕೆ ಜೆಡಿಎಸ್-ಬಿಜೆಪಿ ಒಪ್ಪಂದ ಮಾಡಿಕೊಳ್ಳುತ್ತದೆ ಎನ್ನುವುದು ಸುಳ್ಳು. ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡು ಸಿದ್ದರಾಮಯ್ಯ ಸೋಲಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನಮ್ಮ ಸ್ವಂತ ಶಕ್ತಿ ಮೇಲೆ ನಾವು ಸಿದ್ದರಾಮಯ್ಯ ಅವರನ್ನು ಸೋಲಿಸುತ್ತೇವೆ. ಬಿಜೆಪಿ ಜೊತೆ ಕುತಂತ್ರ ರಾಜಕೀಯ ಮಾಡಿ ಸಿದ್ದರಾಮಯ್ಯನವರನ್ನು ಸೋಲಿಸಲ್ಲ. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಚುನಾವಣೆಯಲ್ಲಿ ನಾವೇ ಸೋಲಿಸ್ತೇವೆ. ಇದೆಲ್ಲ ವಿಧಿ ಆಟ ಎಂದರು.
Advertisement
ಕೋಲಾರದಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ. 6 ತಿಂಗಳ ಹಿಂದೆಯೇ ಅಭ್ಯರ್ಥಿ ಫೈನಲ್ ಆಗಿದೆ. ಸಿದ್ದರಾಮಯ್ಯ ಬಂದ್ರು ಅಂತ ಮತ್ತೆ ಹೊಸ ಅಭ್ಯರ್ಥಿ ಹಾಕಲ್ಲ ಅಂತ ಸ್ಪಷ್ಟಪಡಿಸಿದರು.
Advertisement
ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ಸಾಫ್ಟ್ ಆಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಸಿದ್ದರಾಮಯ್ಯ ವಿರುದ್ದವಾಗಿ ಸಾಫ್ಟ್ ಆಗಿಲ್ಲ. ನಮ್ಮ ಕೆಲಸ ನಾವು ಮಾಡ್ತಿದ್ದೇವೆ. ವೀರಾವೇಶವಾಗಿ ಮಾತಾಡಿದ್ರೆ ಏನು ಪ್ರಯೋಜನ ಇಲ್ಲ. ಎಲ್ಲಿ ಏನು ಕೆಲಸ ಮಾಡಬೇಕೋ ಅಲ್ಲಿ ಕೆಲಸ ಮಾಡ್ತೀವಿ. ಮೃದುವಾಗಿಯೇ ಹೋಗೋಣ ಅಂತ ತೀರ್ಮಾನ ಮಾಡಿದ್ದೇವೆ ಅಂತ ತಿಳಿಸಿದರು.
ಕುಮಾರಸ್ವಾಮಿ ಬಾಲಿಶ ಹೇಳಿಕೆ ಕೊಡ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕೊಡೋದೇ ಬಾಲಿಶ ಹೇಳಿಕೆ. ಅವರೇನು ನನ್ನ ಬಗ್ಗೆ ಹೇಳೋದು? ನನ್ನ ಹೇಳಿಕೆ ಅವರಿಗೆ ಬಾಲಿಶವಾಗಿ ಕಾಣುತ್ತೆ ಅದಕ್ಕೆ ನಾನೇನು ಮಾಡಲಿ ಅಂತ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟರು.