ಬೆಂಗಳೂರು: ಕರ್ನಾಟಕವನ್ನ ಜಮ್ಮು ಕಾಶ್ಮೀರ ಅಥವಾ ಪಾಕಿಸ್ತಾನ ಮಾಡ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಬಿಜೆ.ಪುಟ್ಟಸ್ವಾಮಿ ಆರೋಪಿಸಿದ್ದಾರೆ.
ನೆಲಮಂಗಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Advertisement
ಗ್ರಹ ಸಚಿವಾಲಯದ ಸಲಹೆಗಾರ ಕೆಂಪಯ್ಯ ಅವರಿಂದ ಆಡಳಿತ ದುರುಪಯೋಗ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದಮೇಲೆ ರಾಜ್ಯದಲ್ಲಿ 6,521 ಕೊಲೆ, 19,000 ಮಹಿಳೆಯರ ಮೇಲೆ ದೌರ್ಜನ್ಯ, 5600 ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ. ಸಿಎಂ ಸಿದ್ದರಾಮಯ್ಯ ಸಾಕಷ್ಟು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಶೀಘ್ರವಾಗಿ ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದರು.
Advertisement
ತಮ್ಮ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ಇಗಾಗಲೇ ಎಸಿಬಿಯಲ್ಲಿ ಕ್ಲಿನ್ ಚಿಟ್ ನೀಡಲಾಗಿದೆ. ಮತ್ತೆ ದೂರು ನೀಡಿರುವ ದುರುದ್ದೇಶ ಏನು ಅಂತ ನನಗೆ ಗೊತ್ತಿಲ್ಲ. ಈ ಹಿಂದೆ ಜೆಡಿಎಸ್ ವರಿಷ್ಠ ನಾಯಕ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ವಿರುದ್ಧ ಹೋರಾಟ ಮಾಡಿದ್ದೆ. ಮತ್ತೆ ಎಸಿಬಿಗೆ ದೂರು ನೀಡಿರುವುದು ರಾಜಕೀಯ ಪ್ರೇರಿತ ಎಂದು ಹೇಳಿದರು.
Advertisement
ಸರ್ಕಾರ ಎಸಿಬಿಯನ್ನ ದುರುಪಯೋಗ ಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದೆ. ಎಸಿಬಿಗೆ ದೂರು ನೀಡಿರೋ ಸಾಮಾಜಿಕ ಕಾರ್ಯಕರ್ತ ಹನುಮಂತೇಗೌಡ ಅವರು ಯಾರು ಅಂತ ನನಗೆ ಗೊತ್ತಿಲ್ಲ ಎಂದು ಹೇಳಿದರು.