ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳ ಪೈಕಿ 46ರಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಈ ಮೂಲಕ ಪೇಮಾ ಖಂಡು ಅವರು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದ್ದಾರೆ.
ನ್ಯಾಷನಲ್ ಪೀಪಲ್ಸ್ ಪಾರ್ಟಿ 5 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (NCP) 3 ಸ್ಥಾನಗಳನ್ನು ಗೆದ್ದಿದೆ. ಅರುಣಾಚಲದ ಪೀಪಲ್ಸ್ ಪಾರ್ಟಿ 2, ಕಾಂಗ್ರೆಸ್ 1 ಮತ್ತು ಸ್ವತಂತ್ರರು 3 ಸ್ಥಾನಗಳನ್ನು ಗೆದ್ದಿದ್ದಾರೆ.
Advertisement
Advertisement
2019ರಲ್ಲಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದಿತ್ತು. 50.86% ರಷ್ಟು ಮತಗಳನ್ನು ಪಡೆದಿದ್ದಾರೆ. ಜೆಡಿಯು 7 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 2024 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 54.57 % ಮತಗಳನ್ನು ಪಡೆದು 5 ಸ್ಥಾನಗಳನ್ನು ಗಳಿಸಿತು. ಇದನ್ನೂ ಓದಿ: ಅರುಣಾಚಲಪ್ರದೇಶ, ಬಿಜೆಪಿಗೆ ಐತಿಹಾಸಿಕ ದಿನ: ಪೆಮಾ ಖಂಡು
Advertisement
In the midst of the celebrations among party karyakartas over the overwhelming victory in the Assembly elections, Honorable Chief Minister Shri @PemaKhanduBJP Ji arrived at the state office to join the celebrations where he also addressed the gathering and expressed his gratitude… pic.twitter.com/lYQqsqDOw1
— BJP ArunachalPradesh (@BJP4Arunachal) June 2, 2024
Advertisement
ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಗೆದ್ದಿದ್ದಾರೆ. 2016ರ ಜುಲೈನಲ್ಲಿ ಕಾಂಗ್ರೆಸ್‌ನಲ್ಲಿದ್ದಾಗ ಪೆಮಾ ಖಂಡು ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ಸಿಎಂ ಆದ ನಂತರ ಅವರು ಸೆಪ್ಟೆಂಬರ್‌ನಲ್ಲಿ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲಕ್ಕೆ ಸೇರಿದರು. ಇದಾದ ಬಳಿಕ 2016ರ ಡಿಸೆಂಬರ್‌ನಲ್ಲಿ ಬಿಜೆಪಿ ಸೇರಿದ್ದರು.