ಭಜರಂಗಿ 2 ಖ್ಯಾತಿಯ ಚೆಲುವರಾಜು (Cheluvaraju) ಹಾಗೂ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಕಲಾವಿದೆಯಾಗಿ ಗುರುತಿಸಿಕೊಂಡಿರುವ ನಟಿ ವಿದ್ಯಾ ವಿಜಯ್ (Vidya Vijay) ಅಭಿನಯಿಸಿರುವ ‘ಮನಸು ಜಾರಿದೆ’ ಆಲ್ಬಂ ಸಾಂಗ್ (Album Song) ಇತ್ತೀಚೆಗೆ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಪ್ರಣಯ ರಾಜ ಶ್ರೀನಾಥ್ ಅವರಿಗೆ ಜೀವಮಾನ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಾಜಿ ಸಚಿವರಾದ ಕೃಷ್ಣಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಲ್ಲಿರುವವರೆಲ್ಲ ಬಹಳ ಚಿಕ್ಕವರು. ಈಗಿನ ಪೀಳಿಗೆಯವರು ನನಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ತುಂಬಾ ಖುಷಿಯಾಗಿದೆ ಎಂದರು ಪ್ರಣಯರಾಜ ಶ್ರೀನಾಥ್. ಇದನ್ನೂ ಓದಿ:ರೂಪೇಶ್ ಶೆಟ್ಟಿ ‘ಸರ್ಕಸ್’ಗೆ ಬಿಗ್ ಬಾಸ್ ಟೀಮ್ ಸಾಥ್
ವಿದ್ಯಾ ವಿಜಯ್ ಅವರು ಸಹ ‘ಮನಸು ಜಾರಿದೆ’ (Manasu Jaride) ಆಲ್ಬಂ ಸಾಂಗ್ ಕುರಿತು ಹಾಗೂ VIDIS ಎಂಟರ್ಟೈನ್ಮೆಂಟ್ ಮೂಲಕ ಆಯೋಜಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ನಡೆದ ಈ ಸಮಾರಂಭದಲ್ಲಿ ಮಕ್ಕಳಿಗಾಗಿ ದೇಸಿಶೈಲಿಯ ದೇಸಿ ನಡಿಗೆ ಎಂಬ ಫ್ಯಾಶನ್ ಶೋ ಕೂಡ ಆಯೋಜಿಸಲಾಗಿತ್ತು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]