ಉಡುಪಿ: ಅಯೋಧ್ಯೆಯ (Ayodhya) ರಾಮನ ವಿಗ್ರಹ (Ram Lalla Idol), ಸಾಕ್ಷಾತ್ ರಾಮ ದೇವರನ್ನೇ ಕಣ್ಣಾರೆ ನೋಡಿದಂತಾಗುತ್ತದೆ. ರಾಮನ ಪ್ರತಿಮೆಯ ಮುಖ ಬಹಳ ಸುಂದರವಾಗಿದೆ ಎಂದು ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ಶ್ರೀಗಳು (Vidyavallabha Theertha Swamiji) ಹೇಳಿದ್ದಾರೆ.
ಅಯೋಧ್ಯೆಯ ರಾಮಮಂದಿರಕ್ಕೆ (Ram Mandir) ಪ್ರಾಣಪ್ರತಿಷ್ಠಾಪನೆಗೆ (Pran Pratishtha) ತೆರಳುವ ಮುನ್ನ ಮಂಗಳೂರಿನಲ್ಲಿ (Mangaluru) ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ರಾಮನ ವಿಗ್ರಹದ ಬಗ್ಗೆ ವಿವರಿಸಿದ ಅವರು, ವಿಗ್ರಹದ ಮಂದಸ್ಮಿತ ದೇಹ ಲಕ್ಷಣಗಳು ಆಕರ್ಷಕವಾಗಿದೆ. ರಾಮನ ಪ್ರತಿಮೆ ಕರ್ನಾಟಕದಲ್ಲಿ ಆಗಿದ್ದು ಎನ್ನುವುದು ಸಂತೋಷದ ವಿಚಾರ ಎಂದಿದ್ದಾರೆ. ಇದನ್ನೂ ಓದಿ: ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ನಿಲುವಿನಿಂದ ಅಸಮಾಧಾನ; ಗುಜರಾತ್‌ನ ‘ಕೈ’ ಶಾಸಕ ರಾಜೀನಾಮೆ
Advertisement
Advertisement
ಅಯೋಧ್ಯೆಗೆ ಆಹ್ವಾನ ಬಂದಿರುವುದು ಖುಷಿ ತಂದಿದೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಬೇಕು ಎಂಬ ಬಯಕೆ ಇತ್ತು. ಪ್ರಾಣಪ್ರತಿಷ್ಠೆ ವೇಳೆ ಆಹ್ವಾನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ. ರಾಮಮಂದಿರ ನಿರ್ಮಾಣದಲ್ಲಿ ಪೇಜಾವರ ಶ್ರೀಗಳ ಪ್ರಯತ್ನ ಬಹಳ ಇದೆ. ಟೆಂಟ್‍ನ ಒಳಗೆ ರಾಮನ ವಿಗ್ರಹ ಪ್ರತಿಷ್ಠೆ ಮಾಡಿದವರೇ ಪೇಜಾವರ ಶ್ರೀಗಳು. ಅನೇಕರ ಪ್ರಯತ್ನದ ಫಲ ಇದು. ಪ್ರಧಾನಿ ಮೋದಿಯವರ ಕಾಲದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದಿದ್ದಾರೆ.
Advertisement
Advertisement
ಅಯೋಧ್ಯೆಯಲ್ಲಿ ಮುಂದೆ ಶಾಶ್ವತವಾಗಿ ರಾಮನ ಪ್ರತಿಮೆ ಇರಲಿದೆ. ನಮ್ಮ ರಾಜ್ಯದ ಶಿಲ್ಪಿ ಕೆತ್ತಿರುವ ಪ್ರತಿಮೆ ಸುಂದರವಾಗಿ ಮೂಡಿಬಂದಿದೆ. ಅಯೋಧ್ಯೆಗೆ ಹೋದಾಗಲೆಲ್ಲ ಇದನ್ನು ನಾವು ನೆನಪು ಮಾಡಿಕೊಳ್ಳಬಹುದು ಎಂದಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ