ನಿರ್ದೇಶಕ ವಿಘ್ನೇಶ್ ಶಿವನ್ ಮತ್ತು ಲೇಡಿ ಸೂಪರ್ ಸ್ಟಾರ್ ನಯನತಾರ ಮದುವೆಯ ನಂತರ ತಾವು ಆರಾಧಿಸುವ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರೆಳಿದ್ದರು. ಆ ಸಮಯದಲ್ಲಿ ನಯನತಾರಾ ಎಡವಟ್ಟು ಮಾಡಿಕೊಂಡಿದ್ದರು. ಚಪ್ಪಲಿ ಧರಿಸಿಕೊಂಡು ನಯನತಾರಾ ದರ್ಶನಕ್ಕೆ ಆಗಮಿಸಿದ್ದರು ಎನ್ನುವುದಕ್ಕಾಗಿ ವಿವಾದವಾಗಿತ್ತು. ಅದಕ್ಕೀಗ ವಿಘ್ನೇಶ್ ಶಿವನ್ ಕ್ಷಮೆ ಕೇಳಿದ್ದಾರೆ. ಅರಿವಿಗೆ ಬಾರದೇ ಇರುವ ತಪ್ಪು ಅದಾಗಿದೆ ಎಂದು ಮಾತನಾಡಿದ್ದಾರೆ. ಓದಿ : ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ
ನಿನ್ನೆ ಪತಿ ವಿಘ್ನೇಶ್ ಶಿವನ್ ಜೊತೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ನಯನತಾರಾ. ಈ ಜೋಡಿ ಸಾಂಪ್ರದಾಯಿಕ ಉಡುಪಿನಲ್ಲೇ ದೇವಸ್ಥಾನ ಆವರಣಕ್ಕೆ ಪ್ರವೇಶ ಮಾಡಿದರು. ಹಳದಿ ಬಣ್ಣದ ಸೀರೆಯಲ್ಲಿ ನಯನತಾರಾ ಕಂಗೊಳಿಸುತ್ತಿದ್ದರೆ, ಬಿಳಿ ಬಣ್ಣದ ಅಂಗಿ ಮತ್ತು ಪಂಚೆ ತೊಟ್ಟಿದ್ದರು ವಿಘ್ನೇಶ್. ಆದರೆ, ನಯನತಾರಾ ದೇವಸ್ಥಾನದ ಆವರಣದ ಒಳಗೆ ಚಪ್ಪಲಿ ಧರಿಸಿದ್ದರು ಎನ್ನುವುದೇ ಇದೀಗ ಆಕ್ರೋಶಕ್ಕೆ ಕಾರಣವಾಗಿತ್ತು.
ಪತಿ ವಿಘ್ನೇಶ್ ಬರಿಗಾಲಲ್ಲಿ ನಡೆದುಕೊಂಡು ಬಂದರೆ, ನಯನತಾರಾ ಚಪ್ಪಲಿ ಧರಿಸಿದ್ದರಂತೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನಯನತಾರಾ ವಿರುದ್ಧ ಭಕ್ತರು ಮುಗಿಬಿದ್ದಿದ್ದರು. ವಿವಾದ ಸೃಷ್ಟಿ ಆಗುತ್ತಿದ್ದಂತೆಯೇ ತಿರುಮಲ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ, ನಯನತಾರಾ ಚಪ್ಪಲಿ ಧರಿಸಿ ಓಡಾಡಿದ ಸ್ಥಳದಲ್ಲಿ ಭಕ್ತರಿಗೆ ಪಾದರಕ್ಷೆಗಳನ್ನು ತೊಡಲು ಅವಕಾಶವಿದೆ ಎಂದು ಹೇಳಿದ್ದಾರೆ.