ಹೈದರಾಬಾದ್: ಟಾಲಿವುಡ್ ಬಹುನಿರೀಕ್ಷಿತ ಲೈಗರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಸಂಭಾವನೆ ನಟ ವಿಜಯ್ ದೇವರಕೊಂಡಗಿಂತ ದುಬಾರಿ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ.
Advertisement
ನಟ ವಿಜಯ್ ದೇವರಕೊಂಡ ಅಭಿನಯಿಸುತ್ತಿರುವ ಲೈಗರ್ ಸಿನಿಮಾದಲ್ಲಿ ಗಾಡ್ ಆಫ್ ದಿ ಬಾಕ್ಸಿಂಗ್ ಎಂದೇ ಖ್ಯಾತಿ ಪಡೆದಿರುವ ಅಮೆರಿಕಾದ ಮೈಕ್ ಟೈಸನ್ ಅಭಿನಯಿಸಲಿದ್ದಾರೆ ಎಂಬ ವಿಚಾರವನ್ನು ಚಿತ್ರತಂಡ ಇತ್ತೀಚೆಗಷ್ಟೇ ರಿವೀಲ್ ಮಾಡಿತ್ತು. ಇದನ್ನೂ ಓದಿ: ಫಸ್ಟ್ ಟೈಂ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್
Advertisement
Advertisement
ಚಿತ್ರದ ಅತಿಥಿ ಪಾತ್ರವೊಂದರಲ್ಲಿ ಮೈಕ್ ಟೈಸನ್, ಕ್ಲೈಮ್ಯಾಕ್ಸ್‍ಗಿಂತಲೂ ಬರುವ ಚಿಕ್ಕ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದು, ಈ ದೃಶ್ಯದಲ್ಲಿ ಅಭಿನಯಿಸಲು ದುಬಾರಿ ಸಂಭಾವನೆ ಪಡೆಯಲಿದ್ದಾರೆ. ಅದು ಲೈಗರ್ ಸಿನಿಮಾ ನಟ ವಿಜಯ್ ದೇವರಕೊಂಡ ಪಡೆಯವ ಸಂಭಾವನೆಗಿಂತಲೂ ಹೆಚ್ಚು ಎಂಬ ವಿಚಾರ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ.
Advertisement
View this post on Instagram
ಮೈಕ್ ಟೈಸನ್‍ಗೆ ಹೆಚ್ಚು ಸಂಭಾವನೆ ನೀಡುವುದರಿಂದ ಯಾವುದೇ ನಷ್ಟವಿಲ್ಲ. ಸಾಕಷ್ಟು ಸಂಖ್ಯೆಯಲ್ಲಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇರುವ ಕಾರಣ ಸಿನಿಮಾ ಕಲೆಕ್ಷನ್ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿದೆ ಚಿತ್ರತಂಡ. ಈ ಚಿತ್ರಕ್ಕೆ ಪುರಿ ಜಗನ್ನಾಥ್, ಕರಣ್ ಜೋಹರ್, ಚಾರ್ಮಿ ಕೌರ್, ಅಪೂರ್ವ ಮೆಹ್ತಾ, ಹೀರೂ ಯಶ್ ಜೋಹರ್ ಒಟ್ಟಾಗಿ ಸೇರಿಕೊಂಡು ಬಂಡವಾಳ ಹೂಡಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್
View this post on Instagram
ಸೋಮವಾರವಷ್ಟೇ ವಿಜಯ್ ದೇವರಕೊಂಡ ತಮ್ಮ ಟ್ವಿಟ್ಟರ್ ನಲ್ಲಿ ಮೈಕ್ ಟೈಸನ್ ಲೈಗರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ವಿಚಾರವನ್ನು ಶೇರ್ ಮಾಡಿಕೊಂಡಿದ್ದು, ನಿಮಗೆ ಭರವಸೆಯನ್ನು ನೀಡಿದ್ದೆವು. ಅದರಂತೆ ಇಂದು ನಾವು ಪ್ರಾರಂಭಿಸಿದ್ದೇವೆ. ಭಾರತೀಯ ಪರದೆಯಲ್ಲಿ ಮೊದಲ ‘ಲೈಗರ್’ ಸಿನಿಮಾದಲ್ಲಿ ಗಾಡ್ ಆಫ್ ಬಾಕ್ಸಿಂಗ್, ದಿ ಲೆಜೆಂಡ್, ದಿ ಬೀಸ್ಟ್, ದಿ ಗ್ರೇಟೆಸ್ಟ್ ಆಲ್ ಟೈಮ್ ಐರನ್ ‘ಮೈಕ್ ಟೈಸನ್’ ಎಂದು ಬರೆದು ಟ್ವೀಟ್ ಮಾಡುವ ಮೂಲಕ ಗಾಡ್ ಆಫ್ ಬಾಕ್ಸಿಂಗ್ ನನ್ನು ಭಾರತೀಯ ಪರದೆಯ ಮೇಲೆ ತರುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.