ನಟ ವಿಜಯ್ ದೇವರಕೊಂಡ (Vijay Deverakonda) ಅವರ (Car Accident) ಕಾರು ಅಪಘಾತಕ್ಕೊಳಗಾಗಿದೆ. ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದೆ.
ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮತ್ತೊಂದು ಕಾರು ವಿಜಯ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ `ಬಡವರ ಬರ್ಗರ್’ ತಿಂದು ಓವರ್ ಆ್ಯಕ್ಟಿಂಗ್ ಮಾಡಿದ್ರಾ ಶಿಲ್ಪಾ ಶೆಟ್ಟಿ?
ಅಪಘಾತದ ನಂತರ, ನಟ ಸ್ನೇಹಿತನ ಕಾರಿನಲ್ಲಿ ತೆರಳಿದ್ದಾರೆ. ಎರಡು ದಿನಗಳ ಹಿಂದಷ್ಟೇ ನಟಿ ರಶ್ಮಿಕಾ ಮಂದಣ್ಣ ಅವರ ಜೊತೆ ವಿಜಯ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನೂ ಓದಿ: ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್, ಫೆಬ್ರವರಿಯಲ್ಲಿ ಮದುವೆ?