ಹೊಸ ಸಿನಿಮಾ ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಮ್ಸ್- ಪೋಸ್ಟರ್ ರಿವೀಲ್

Public TV
1 Min Read
hombale films

‘ಕೆಜಿಎಫ್’, ‘ಕಾಂತಾರ’ (Kantara) ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌(Hombale Films) ಇದೀಗ ಹೊಸ ಸಿನಿಮಾವೊಂದನ್ನು ಘೋಷಿಸಿದ್ದಾರೆ. ಹೊಸ ಚಿತ್ರದ ಪೋಸ್ಟರ್ ಅನನು ಚಿತ್ರತಂಡ ಅನಾವರಣ ಮಾಡಿದೆ ಇದನ್ನೂ ಓದಿ:ಬಿಹಾರದಲ್ಲಿ ನಡೆಯಲಿದೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಟ್ರೈಲರ್ ಲಾಂಚ್

vijay kiragandur

ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಘೋಷಿಸಿದ ಬೆನ್ನಲ್ಲೇ ಹೊಸ ಸಿನಿಮಾದ ಪೋಸ್ಟರ್ ಅನ್ನು ಹೊಂಬಾಳೆ ಫಿಲ್ಮ್ಸ್‌ ಹಂಚಿಕೊಂಡಿದೆ. ಪೋಸ್ಟರ್‌ನಲ್ಲಿ ರಕ್ತ ಮೆತ್ತಿದ ಕೈ, ನರಸಿಂಹನ ಕೈ ರೀತಿ ಕಾಣುತ್ತಿದೆ. ಕೈ ತುಂಬಾ ಆಭರಣಗಳು ಇವೆ. ನಂಬಿಕೆಗೆ ಸವಾಲು ಬಂದಾಗ, ಅವನು ಕಾಣಿಸಿಕೊಳ್ಳುತ್ತಾನೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಈ ಸಿನಿಮಾದ ಕುರಿತು ಸಂಪೂರ್ಣ ಮಾಹಿತಿಯನ್ನು ನವೆಂಬರ್ 16ರಂದು ಮಧ್ಯಾಹ್ನ 03:33ಕ್ಕೆ ರಿವೀಲ್ ಮಾಡೋದಾಗಿ ಹೊಂಬಾಳೆ ಫಿಲ್ಮ್ಸ್‌ ತಿಳಿಸಿದೆ. ಈ ಚಿತ್ರ ಹಿಂದಿ, ಕನ್ನಡ, ತೆಲುಗು ಮತ್ತು ತಮಿಳು, ಮಲಯಾಳಂನಲ್ಲಿ ಮೂಡಿ ಬರಲಿದೆ. ಈ ಚಿತ್ರಕ್ಕೆ ಅಶ್ವಿನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ಸಂಸ್ಥೆ ಜೊತೆ ಕ್ಲೀನ್ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಲಿದೆ.

Share This Article