ಮುಂಬೈ: ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ವಿದೇಶದಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಅಕ್ರಮ ಹಣ ವರ್ಗಾವಣೆ ತಡೆ ನ್ಯಾಯಾಲಯ (ಪಿಎಂಎಲ್‍ಎ) ಘೋಷಿಸಿದೆ. ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ ಜಾರಿಗೆ ಬಂದ ಬಳಿಕ ಘೋಷಣೆಯಾದ ಮೊದಲ ಉದ್ಯಮಿ ವಿಜಯ್ ಮಲ್ಯ ಆಗಿದ್ದಾರೆ.
ಸಾಲ ತೆಗೆದುಕೊಂಡು ಮರು ಪಾವತಿಸದೇ ವಿದೇಶದಲ್ಲಿ ನೆಲೆಸಿರುವ ವಿಜಯ್ ಮಲ್ಯರನ್ನ ಆರ್ಥಿಕ ಅಪರಾಧಿ ಎಂದು ಘೋಷಿಸಬೇಕೆಂದು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ 2018, ನವೆಂಬರ್ ನಲ್ಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಇಡಿ ಮತ್ತು ಸಿಬಿಐ ಸುಳ್ಳು ಆರೋಪ ಮಾಡುತ್ತಿದ್ದು, ಸಾಲ ಮರುಪಾವತಿಸಲು ನ್ಯಾಯಾಲಯ ಅವಕಾಶ ನೀಡಬೇಕೆಂದು ಮಲ್ಯ ಪರ ವಕೀಲರು ವಾದ ಮಂಡಿಸಿದ್ದರು.
Advertisement
Advertisement
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಇಂದು ವಿಜಯ್ ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ತೀರ್ಪು ನೀಡಿದೆ. ತೀರ್ಪಿನ ಬಳಿಕ ದೇಶದಲ್ಲಿರುವ ವಿಜಯ್ ಮಲ್ಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಹಾಯವಾಗಲಿದೆ.
Advertisement
ಲಂಡನ್ ನಲ್ಲಿರುವ ವಿಜಯ್ ಮಲ್ಯರನ್ನು ಭಾರತಕ್ಕೆ ಗಡಿಪಾರು ಮಾಡಲು ಲಂಡನ್ ವೆಸ್ಟ್ ಮಿನಿಸ್ಟರ್ ಕೋರ್ಟ್ ಅನುಮತಿ ನೀಡಿದೆ. ತೀರ್ಪಿನ ಬಳಿಕ ಪ್ರತಿಕ್ರಿಯಿಸಿದ್ದ ವಿಜಯ್ ಮಲ್ಯ, ನಾನು ಸಾಲಗಾರನಲ್ಲ. ಕಿಂಗ್ ಫಿಷರ್ ಏರ್ ಲೈನ್ಸ್ ತೆಗೆದುಕೊಂಡಿದ್ದ ಸಾಲಕ್ಕೆ ಜಾಮೀನು ನಿಂತಿದ್ದೆ. ಆದರೆ ಕಿಂಗ್ ಫಿಷರ್ ಏರ್ ಲೈನ್ಸ್ ಉದ್ಯಮದಿಂದ ನಷ್ಟವಾಯಿತು. ಹೀಗಾಗಿ ಸಂಸ್ಥೆ ನಷ್ಟದ ಪಾಲಾಗಿದ್ದು, ನಾನು ಆ ನಷ್ಟದ ಜವಾಬ್ದಾರನಾಗಿದ್ದೇನೆ ಎಂದು ಹೇಳಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv