ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಿದೆ.
2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಬಳಿಕ ಪರಾರಿಯಾಗಿರುವ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ. ಇದರೊಂದಿಗೆ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಲಾದ 40 ಮಿಲಿಯನ್ ಡಾಲರ್‌ಗಳನ್ನು ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
Advertisement
Supreme Court awards 4-month jail sentence and imposes Rs 2000 fine on fugitive businessman Vijay Mallya who was found guilty of contempt of court in 2017 for withholding information from the court pic.twitter.com/Z8zP5P8qdf
— ANI (@ANI) July 11, 2022
Advertisement
ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರ ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಮಾರ್ಚ್ 10 ರಂದು ಮದ್ಯದ ದೊರೆ ವಿರುದ್ಧದ ವಿಚಾರಣೆಯು `ಡೆಡ್ ವಾಲ್’ ಪ್ರಕರಣದಲ್ಲಿ ತೀರ್ಪನ್ನು ಕಾಯ್ದಿರಿತ್ತು.
Advertisement
ಈ ಕುರಿತು ನಡೆದ ವಿಚಾರಣೆ ಈ ವೇಳೆ ಹಿರಿಯ ವಕೀಲ ಜೈದೀಪ್ ಗುಪ್ತಾ ಅವರ ವಾದವನ್ನು ಆಲಿಸಿದ ಬಳಿಕ ಮಾರ್ಚ್ 15 ರೊಳಗೆ ಲಿಖಿತ ದಾಖಲೆಗಳನ್ನು ಸಲ್ಲಿಸಲು ಮಲ್ಯ ಅವರನ್ನು ಪ್ರತಿನಿಧಿಸುತ್ತಿದ್ದ ವಕೀಲರಿಗೆ ಸೂಚನೆ ನೀಡಿತ್ತು.
Advertisement
ಹಿಂದೆ 9 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮರುಪಾವತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳನ್ನು ಮಲ್ಯ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅವರು ಆಸ್ತಿಯನ್ನು ಬಹಿರಂಗಪಡಿಸುತ್ತಿಲ್ಲ ಮತ್ತು ನಿರ್ಬಂಧದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ ವರ್ಗಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರಿಂದಾಗಿ 2017ರಲ್ಲಿ ಮಲ್ಯರನ್ನು ಅಪರಾಧಿ ಎಂದು ಪರಿಗಣಿಸಲಾಯಿತು. ನಂತರ ಅವರಿಗೆ ನೀಡಬೇಕಾದ ಉದ್ದೇಶಿತ ಶಿಕ್ಷೆಯ ಕುರಿತು ಪಟ್ಟಿ ಮಾಡಲಾಯಿತು.
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತನ್ನ ಮಕ್ಕಳಿಗೆ 40 ಮಿಲಿಯನ್ ಡಾಲರ್ ವರ್ಗಾವಣೆ ಮಾಡಿದ್ದಕ್ಕಾಗಿ 2017ರ ತೀರ್ಪನ್ನು ಅವಹೇಳನ ಮಾಡಿದ ಮಲ್ಯ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗಿತ್ತು. ನಂತರದಲ್ಲಿ 2016ರ ಮಾರ್ಚ್‌ನಿಂದ ಯುಕೆಗೆ ತೆಳಿದರು, 2017 ಏಪ್ರಿಲ್ 18ರಂದು ಸ್ಕಾಟ್ಲೆಂಡ್ ಯಾರ್ಡ್ ಜಾರಿಗೊಳಿಸಿದ ಹಸ್ತಾಂತರ ವಾರಂಟ್ ಮೇಲೆ ಜಾಮೀನಿನ ಮೇಲೆ ಹೊರಬಂದರು.
Live Tv
[brid partner=56869869 player=32851 video=960834 autoplay=true]