ಲಂಡನ್: ಭಾರತೀಯ ಬ್ಯಾಂಕುಗಳಿಂದ ಸುಮಾರು 9 ಸಾವಿರ ಕೋಟಿ ರೂ. ಸಾಲ ಮಾಡಿ ಇಂಗ್ಲೆಂಡ್‌ಗೆ ಪರಾರಿಯಾಗಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಲಂಡನ್ ಮನೆಯಿಂದಲೇ ಯುಕೆ ಕೋರ್ಟ್ ಹೊರ ಹಾಕಿದೆ.
ವಿಜಯ್ ಮಲ್ಯ ಅಲ್ಲದೇ ಇಡೀ ಕುಟುಂಬವನ್ನು ಲಂಡನ್‌ನ ಮನೆಯಿಂದ ಹೊರಹಾಕುವಂತೆ ನ್ಯಾಯಾಲಯ ಆದೇಶ ನೀಡಿದೆ. ಮಲ್ಯ ಅವರ ಕೋಟ್ಯಂತರ ರೂ. ಬೆಲೆ ಬಾಳುವ ಐಷಾರಾಮಿ ಮನೆಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಬೇಕೇ? ಬೇಡವೇ ಎಂಬುದರ ಬಗ್ಗೆ ಹೈಕೋರ್ಟ್ ಕಳೆದ ವಾರ ತೀರ್ಪನ್ನು ಕಾಯ್ದಿರಿಸಿತ್ತು.
ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಮಲ್ಯ ಅವರ ಮನೆಯನ್ನು ಸ್ವಿಸ್ ಬ್ಯಾಂಕ್ ಯುಬಿಎಸ್ ಸ್ವಾಧೀನಪಡಿಸಿಕೊಳ್ಳಬೇಕು ಎಂದು ಆದೇಶಿಸಿದೆ. ಇದನ್ನೂ ಓದಿ: 2 ದಿನದಲ್ಲಿ ಮದುವೆ ಇಟ್ಕೊಂಡು ಬ್ಯಾಂಕ್ ದರೋಡೆಗೆ ಬಂದು ಸಿಕ್ಕಿಬಿದ್ದ ಕಳ್ಳ ಮದುಮಗ
9 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಗಳಿಗೆ ಬಾಕಿ ಹಣ ನೀಡಬೇಕಿರುವ ವಿಜಯ್ ಮಲ್ಯ ಅವರ ಲಂಡನ್ ನಲ್ಲಿರುವ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ನ್ಯಾಯಾಲಯದಲ್ಲಿ 13 ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಕಾನೂನು ಸಮರ ನಡೆಸುತ್ತಿದೆ.
2017ರಲ್ಲಿ ಇಂಗ್ಲೆಂಡ್‌ನಲ್ಲಿ ಮಲ್ಯ ಅವರನ್ನು ಬಂಧಿಸಲಾಗಿತ್ತು. ಉದ್ಯಮಿ ವಿಜಯ್ ಮಲ್ಯ ಗಡೀಪಾರಿಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ, ಈ ವಿಷಯದಲ್ಲಿ ಹಲವು ಕಾನೂನು ತೊಡಕುಗಳು ಎದುರಾದ ಕಾರಣ ಗಡೀಪಾರು ಪ್ರಕ್ರಿಯೆ ವಿಳಂಬವಾಗಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ಭಾರತದ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಇದನ್ನೂ ಓದಿ: ಬಾಂಬ್ ಮಾಡುವುದನ್ನ ಕಲಿತು ಪತ್ನಿ ಮೇಲೆ ಅತ್ಯಾಚಾರ ಮಾಡಿದವನನ್ನ ಕೊಂದ!
ಮಲ್ಯ ಪಾಸ್‍ಪೋರ್ಟ್ ರದ್ದು ಮಾಡಿದ್ದ ಭಾರತ, ಇಂಗ್ಲೆಂಡ್ ಸರ್ಕಾರಕ್ಕೆ ಮಲ್ಯರನ್ನು ಗಡೀಪಾರು ಮಾಡುವಂತೆ ಕೇಳಿತ್ತು. ಆದರೆ ಪಾಸ್‍ಪೋರ್ಟ್ ಮಾನ್ಯತೆ ಕಳೆದುಕೊಂಡಿದ್ದರೂ ಯುಕೆ ಪೌರತ್ವ ಪಡೆದವರಿಗೆ ಇಂಗ್ಲೆಂಡ್‌ನಲ್ಲೇ ನೆಲೆಸಲು ಅವಕಾಶವಿದೆ. ಹೀಗಾಗಿ ಮಲ್ಯ ಲಂಡನ್‌ನಲ್ಲೇ ನೆಲೆಸಿದ್ದಾರೆ.