ಲಂಡನ್: ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್‌ಸಿಬಿ ತಂಡವನ್ನು ವಿಜಯ್ ಮಲ್ಯ ಕೊಂಡಾಡಿದ್ದಾರೆ.
RCB RCB….Congratulations Double back to back IPL Champions. Namma dodda Simhagulu roared loudly and made us all very proud. Very well done you beauties.
— Vijay Mallya (@TheVijayMallya) May 31, 2026
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್‌ಸಿಬಿ ನಿನಗೆ ಅಭಿನಂದನೆಗಳು. ಸತತ ಎರಡು ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದೀರಿ. ನಮ್ಮ ದೊಡ್ಡ ಸಿಂಹಗಳೇ ಜೋರಾಗಿ ಘರ್ಜಿಸಿ ಎಲ್ಲರೂ ಹೆಮ್ಮೆಪಡುವಂತೆ ಮಾಡಿದ್ದೀರಿ ಎಂದು ಹಾಡಿ ಹೊಗಳಿದ್ದಾರೆ.

ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ (Virat Kohli) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಧೂಳೀಪಟ ಮಾಡಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ (GT), ಆರ್‌ಸಿಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ನಲುಗಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನು 12 ಎಸೆತ ಬಾಕಿ ಇರುವಂತೆಯೇ 5 ವಿಕೆಟ್ ನಷ್ಟಕ್ಕೆ 161 ರನ್ ಹೊಡೆದು ಜಯಗಳಿಸಿತು.
