ಚೆನ್ನೈ: ತಮಿಳುನಾಡಿನ (CM Vijay) ತೂತುಕುಡಿ ನಗರದಲ್ಲಿ ಸಿಎಂ ವಿಜಯ್ ಅವರನ್ನು ‘ನಾಳಿನ ಪ್ರಧಾನಿ’ ಎಂದು ಬಿಂಬಿಸಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿವೆ.
ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾದ ಸುಧಾಕರ್. ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಪೋಸ್ಟರ್‌ಗಳಲ್ಲಿ ವಿಜಯ್ ಅವರನ್ನು ಭವಿಷ್ಯದ ಪ್ರಧಾನಿಯಾಗಿ ಬಿಂಬಿಸಿರುವುದು ಗಮನ ಸೆಳೆದಿದೆ. ಇದರ ಬೆನ್ನಲ್ಲೇ ವಿಜಯ್ ಅವರ ರಾಷ್ಟ್ರೀಯ ರಾಜಕೀಯ ಎಂಟ್ರಿ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಟಿವಿಕೆ ನಾಯಕ ಆಧವ್ ಅರ್ಜುನ ಕೂಡ ವಿಜಯ್ ಅವರನ್ನು ಸಂಭಾವ್ಯ ಪ್ರಧಾನಿ ಅಭ್ಯರ್ಥಿಯಾಗಿ ಬೆಂಬಲಿಸುವ ರೀತಿಯಲ್ಲಿ ಮಾತನಾಡಿದ್ದರು.
ಕ್ಷೇತ್ರ ಪುನರ್ವಿಂಗಡಣೆ ವಿಚಾರವಾಗಿ ಮಾತನಾಡಿದ ಆಧವ್ ಅರ್ಜುನ, ಉತ್ತರ ಭಾರತದ ಕೆಲವೇ ರಾಜ್ಯಗಳು ಪ್ರಧಾನಿ ಯಾರು ಎಂಬುದನ್ನು ನಿರ್ಧರಿಸುವ ಪರಿಸ್ಥಿತಿ ಬದಲಾಗಬೇಕು ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದ, ಅದರಲ್ಲೂ ತಮಿಳುನಾಡಿನಿಂದಲೇ ಪ್ರಧಾನಿ ಹೊರಹೊಮ್ಮಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ತಮಿಳುನಾಡಿನ ಹಿತಾಸಕ್ತಿಯನ್ನು ಕಾಪಾಡಬೇಕು ಎಂದೂ ಅವರು ಹೇಳಿದ್ದಾರೆ. ಇದನ್ನೂ ಓದಿ: ಹಾವೇರಿ | ಫುಡ್ ಪ್ರೊಸೆಸಿಂಗ್ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಆಹಾರ ಪದಾರ್ಥ ಸೀಜ್
ತಮಿಳುನಾಡಿಗೆ ಸಂಸತ್ತಿನಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದ್ದರೆ ನೀಟ್, ಜಿಎಸ್‌ಟಿ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯದ ಧ್ವನಿ ಇನ್ನಷ್ಟು ಬಲವಾಗಿರುತ್ತಿತ್ತು ಎಂದು ಆಧವ್ ಅರ್ಜುನ ಹೇಳಿದ್ದಾರೆ.
ಇನ್ನು ಟಿವಿಕೆಯ ಹಿರಿಯ ನಾಯಕ ಕೆ.ಎ. ಸೆಂಗೊಟ್ಟೈಯನ್ ಕೂಡ ವಿಜಯ್ ಬಗ್ಗೆ ದೊಡ್ಡ ಮಾತುಗಳನ್ನಾಡಿದ್ದಾರೆ. ಉತ್ತರ ಭಾರತದ ಜನರೂ ವಿಜಯ್ ಅವರನ್ನು ದೇಶವನ್ನು ಮುನ್ನಡೆಸಬಲ್ಲ ನಾಯಕನಾಗಿ ನೋಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಎಂಜಿಆರ್ ಮತ್ತು ಜಯಲಲಿತಾ ಅವರ ಬಳಿಕ ತಮಿಳುನಾಡನ್ನು ಮಾತ್ರವಲ್ಲ, ಭವಿಷ್ಯದಲ್ಲಿ ಇಡೀ ಭಾರತವನ್ನು ಮುನ್ನಡೆಸುವ ಶಕ್ತಿ ವಿಜಯ್ ಅವರಿಗಿದೆ ಎಂದು ಸೆಂಗೊಟ್ಟೈಯನ್ ಅಭಿಪ್ರಾಯಪಟ್ಟಿದ್ದಾರೆ. ಇದರ ನಡುವೆ ತಮಿಳುನಾಡಿನ ಮಾನವ ಸಂಪನ್ಮೂಲ ನಿರ್ವಹಣಾ ಸಚಿವ ಡಿ. ಶರತ್‌ಕುಮಾರ್ ಕೂಡ ವಿಜಯ್ ಅವರನ್ನು ‘ಮುಂದಿನ ಭಾರತೀಯ ಪ್ರಧಾನಿ’ ಎಂದು ಕರೆದಿದ್ದಾರೆ.ಇದನ್ನೂ ಓದಿ: ಖಾಸಗಿ ತೆಕ್ಕೆಗೆ ‘108’ ಅಂಬುಲೆನ್ಸ್ – ಶೀಘ್ರದಲ್ಲೇ ಟೆಂಡರ್
