ಪಂಚಾಂನನ ಫಿಲಂಸ್ ನಿರ್ಮಾಣದ ಮತ್ತು ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ (Vijay Raghavendra) ಮುಖ್ಯ ಪಾತ್ರದಲ್ಲಿ ನಟಿಸಿರುವ ‘ರಿಪ್ಪನ್ ಸ್ವಾಮಿ’ (Rippen Swaamy) ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಪೋಸ್ಟರ್‌ನಲ್ಲಿ ವಿಜಯ್ ರಾಘವೇಂದ್ರ ಅವರು ರಾ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ತಮಿಳಿನತ್ತ ನಟಿ- ಶಿವಕಾರ್ತಿಕೇಯನ್‌ಗೆ ಶ್ರೀಲೀಲಾ ಜೋಡಿ
View this post on Instagram
ಈ ಹಿಂದೆ ‘ಮಾಲ್ಗುಡಿ ಡೇಸ್’ ಕನ್ನಡ ಸಿನಿಮಾ ನಿರ್ದೇಶನ ಮಾಡಿದ್ದ ಕಿಶೋರ್ ಮೂಡಬಿದ್ರೆ ರಿಪ್ಪನ್ ಸ್ವಾಮಿ ಮೂಲಕ ಒಂದು ಮಾಸ್ ಕಥೆ ಹೇಳಲು ಹೊರಟಿದ್ದಾರೆ. ತಾರಾಗಣದಲ್ಲಿ ಅಶ್ವಿನಿ ಚಂದ್ರಶೇಖರ್, ಪ್ರಕಾಶ್ ತುಮ್ಮಿನಾಡು, ವಜ್ರದೀರ್ ಜೈನ್, ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್ ಮುಂತಾದವರು ನಟಿಸಿದ್ದಾರೆ.
ಇನ್ನೂ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, 48 ದಿನಗಳ ಚಿತ್ರೀಕರಣವನ್ನು ಕೊಪ್ಪ, ಕಳಸ, ಬಾಳೆಹೊನ್ನೂರು ಊರಿನ ಸುತ್ತಮುತ್ತ ನಡೆಸಲಾಗಿದೆ. ಈ ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತವನ್ನು ನೀಡಿದ್ದಾರೆ. ರಂಗನಾಥ್ ಸಿ.ಎಂ ಕ್ಯಾಮೆರಾ ಹಿಡಿದಿದ್ದಾರೆ. ಪಂಚಾಂನನ ಫಿಲಂಸ್‌ನ ನಿರ್ಮಾಣದ ಮೊದಲನೇ ಸಿನಿಮಾ ಇದಾಗಿದೆ. ಸದ್ಯ ಸಿನಿಮಾ ಕೆಲಸ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲಿ ಸಿನಿಮಾ ರಿಲೀಸ್ ಆಗಲಿದೆ.