-ಮಂಗಳವಾರ ಬಿಜೆಪಿ ಸೇರ್ಪಡೆ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಸಿ.ಎಚ್. ವಿಜಯ್ ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಪುನಃ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಕೆಲದಿನಗಳ ಹಿಂದೆ ಬಿಜೆಪಿ ಸೇರುವ ಬಗ್ಗೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದ ವಿಜಯ್ ಶಂಕರ್ ಇದೀಗ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೈಸೂರಿನಿಂದ ಕಣಕ್ಕಿಳಿದಿದ್ದ ವಿಜಯ್ ಶಂಕರ್ ಬಿಜೆಪಿಯ ಪ್ರತಾಪ್ ಸಿಂಹ ವಿರುದ್ಧ ಸೋಲನ್ನು ಕಂಡಿದ್ದರು. ವಿಜಯ್ ಶಂಕರ್ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿರೋದು ಸಿದ್ದರಾಮಯ್ಯರಿಗೆ ಹಿನ್ನಡೆ ಎನ್ನಲಾಗುತ್ತಿದೆ.
Advertisement
Advertisement
ರಾಜೀನಾಮೆ ಸುದ್ದಿ ಹರಿದಾಡುತ್ತಿದ್ದ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ವಿಜಯ್ ಶಂಕರ್, ರಾಜಕಾರಣಿ ಎಷ್ಟು ವರ್ಷ ಮನೆಯಲ್ಲಿ ಕೂರಲು ಸಾಧ್ಯ ಹೇಳಿ. ಹೀಗಾಗಿ ಬದಲಾವಣೆ ಬಯಸಿ ಅಭಿಮಾನಿಗಳ ಅಭಿಪ್ರಾಯ ಕೇಳುತ್ತಿದ್ದೇನೆ. ಹುಣಸೂರು ಉಪ ಚುನಾವಣೆ ದೃಷ್ಟಿಯಿಂದ ಇಂಥಹ ತೀರ್ಮಾನ ಕೈಗೊಳ್ಳುತ್ತಿಲ್ಲ. ಒಂದು ರಾಷ್ಟ್ರೀಯ ಪಕ್ಷಕ್ಕೆ ಕಂಡಿಷನ್ ಹಾಕಿ ಸೇರಲು ಆಗಲ್ಲ. ಒಂದು ವಾರದಲ್ಲಿ ಸ್ಪಷ್ಟ ತೀರ್ಮಾನಕ್ಕೆ ಬರುತ್ತೇನೆ. ಬಿಜೆಪಿ ಸೇರುವ ನಿರ್ಧಾರ ಕೈಗೊಂಡರೆ ಕಾಂಗ್ರೆಸ್ ಯಾಕೆ ಬಿಟ್ಟೆ, ಅಲ್ಲಿನ ಪರಿಸ್ಥಿತಿ ಏನಾಗಿದೆ ಅನ್ನೋದನ್ನು ವಿವರಿಸುತ್ತೇನೆ ಎಂದು ತಿಳಿಸಿದ್ದರು.
Advertisement
ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ವಿಜಯ್ ಶಂಕರ್ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. ಅನರ್ಹ ಶಾಸಕ ಹೆಚ್.ವಿಶ್ವನಾಥ್ ಪ್ರತಿನಿಧಿಸುವ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.