ಹಾವೇರಿ: ವಿಜಯಪುರ-ಮಂಗಳೂರು (Vijayapura-Mangaluru) ನಡುವೆ ಸಂಚರಿಸುವ ಮಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಧನ್ಯವಾದ ತಿಳಿಸಿದ್ದಾರೆ.ಇದನ್ನೂ ಓದಿ:ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ
ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ವಿಜಯಪುರ-ಮಂಗಳೂರು ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ರಾಜ್ಯದ ಪ್ರಮುಖ ದೇವಸ್ಥಾನಗಳಾದ ಶ್ರೀ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗಲಿದೆ. ಬಂದರು ನಗರಿ ಮಂಗಳೂರು ನಗರಕ್ಕೆ ಈ ರೈಲು ನೇರ ಸಂಪರ್ಕವನ್ನು ಒದಗಿಸಲಿದ್ದು, ಇದರ ಸದುಪಯೋಗವನ್ನು ಪಡೆಯಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ. ನನ್ನ ಕೋರಿಕೆಗೆ ಸ್ಪಂದಿಸಿ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿದ ರೈಲ್ವೆ ಇಲಾಖೆಗೆ ಧನ್ಯವಾದಗಳು ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.
ಯಲವಿಗಿ ರೈಲು ನಿಲ್ದಾಣದಲ್ಲಿ ವಿಜಯಪುರ – ಮಂಗಳೂರು ಎಕ್ಸ್‌ಪ್ರೆಸ್ ರೈಲು ಪ್ರತಿದಿನ ರಾತ್ರಿ 9:49 ಗಂಟೆಗೆ ನಿಲುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಮಾದಪ್ಪನ ಬೆಟ್ಟಕ್ಕೆ ಹೋಗುತ್ತಿದ್ದಾಗ ಕೆರೆಗೆ ಉರುಳಿದ ಕಾರು – ಇಬ್ಬರು ಸಾವು