ವಿಜಯಪುರ: ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಎಸ್‍ಎಸ್‍ಎಲ್ ಸಿ ಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದನ್ನು ಡಿಡಿಪಿಐ ಪ್ರಸನ್ನ ಖಚಿತ ಪಡಿಸಿದ್ದಾರೆ.
ವಾಟ್ಸಪ್ ಗಳಲ್ಲಿ ಇಂದು ಗಣಿತ ಪ್ರಶ್ನೆ ಪತ್ರಿಕೆ ಹರಿದಾಡುತ್ತಿತ್ತು. ಮೊರಟಗಿ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಗಣಿತ ಪತ್ರಿಕೆ ಸೋರಿಕೆಯಾದ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಡಿಪಿಐ ಪ್ರಸನ್ನ ಪರಿಶೀಲನೆ ನಡೆಸಿದರು. ತಮ್ಮ ಬಳಿಯ ಪ್ರತಿ ಮತ್ತು ವಾಟ್ಸಪ್ ಪ್ರತಿಯೊಂದಿಗೆ ತುಲನೆ ಮಾಡಿದಾಗ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬುದನ್ನು ಪ್ರಸನ್ನ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಿಂದ ಹೊರ ಬಂದಾಗ ಪ್ರಶ್ನೆ ಪತ್ರಿಕೆ ಸೋರಿಕೆಯ ವಿಷಯ ಗೊತ್ತಾಗಿದೆ.
Advertisement
ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ತಿಳಿಯುತ್ತಲೇ ಮೊರಟಗಿ ಪರೀಕ್ಷಾ ಕೇಂದ್ರಕ್ಕೆ ಬಿಇಓ ಆಗಮಿಸಿ ಸಿಬ್ಬಂದಿಯಿಂದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಸಂಬಂಧ ಸಿಂಧಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪ್ರಸನ್ನ ಮುಂದಾಗಿದ್ದಾರೆ. ಇದನ್ನೂ ಓದಿ: ಗಣಿತ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ – ಮರು ಪರೀಕ್ಷೆ ಇಲ್ಲ