ವಿಜಯಪುರ: ಇದೇ ಅಗಸ್ಟ್ 28 ರಿಂದ 30ರವರೆಗೆ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆ ಎಸ್‍ಒಪಿ ನಿಯಮಾವಳಿ ಅನ್ವಯ ಹಾಗೂ ವ್ಯವಸ್ಥಿತ ಮತ್ತು ನಕಲು ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಆಗಸ್ಟ್ 28 ಶನಿವಾರ ದಂದು ಜೀವಶಾಸ್ತ್ರ, ಗಣಿತ, ಅಗಸ್ಟ್ 29 ರಂದು ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ಮತ್ತು ಅಗಸ್ಟ್ 30 ರಂದು ಕನ್ನಡ ವಿಷಯ ಕುರಿತು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಜೊತೆಗೆ ಪರೀಕ್ಷೆಗಳು ನಕಲು ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
Advertisement
Advertisement
ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ನೋಂದಣಿಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರರಿಗೆ ಅವಕಾಶ ಇರುವುದಿಲ್ಲ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮುಂಚಿತವಾಗಿ ಸ್ಯಾನಿಟೈಜೇಶನ್ ಮಾಡಬೇಕು. ಸುವ್ಯವಸ್ಥಿತ ಪರೀಕ್ಷೆ ನಡೆಸಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲು ತಿಳಿಸಿದ ಅವರು ಎಎಸ್‍ಪಿ ಕಾಲೇಜ ಆಫ್ ಕಾಮರ್ಸ್ ಇಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಅಗತ್ಯ ಕ್ರಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಅಂಬ್ಯುಲೆನ್ಸ್‍ವೊಂದನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ
Advertisement
ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪ ಆಗಬಾರದು. ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ ಉಪನ್ಯಾಸಕರನ್ನು ನಿಯೋಜಿಸಬೇಕು. ನಿಯಮದಂತೆ ಮಾರ್ಗಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಅದರಂತೆ ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್‍ಗಳು, ವೀಕ್ಷಕರು, ಜಾಗ್ರತ ದಳದ ಸದಸ್ಯರು ಅವಶ್ಯಕ ಪೂರ್ವ ಸಿದ್ಧತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
Advertisement
ಪರೀಕ್ಷಾ ಕೇಂದ್ರದ ಸಿಬ್ಬಂದಿ, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಜರ್ನ್ನು ಕಡ್ಡಾಯವಾಗಿ ಮಾಡುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಒಟ್ಟಾರೆ ಯಾವುದೇ ರೀತಿಯ ಲೋಪಯಾಗ ದಂತೆ ಪರೀಕ್ಷೆ ನಡೆಯುವಂತೆ ನೋಡಿಕೊಳ್ಳಲು ಸೂಚಿಸಿದರು. ಇದನ್ನೂ ಓದಿ: ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್
ಸಭೆಯಲ್ಲಿ ಮಾತನಾಡಿದ ಪ.ಪೂ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎನ್ ಬಗಲಿ, ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ. 8400 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿಜಯಪುರ ನಗರದಲ್ಲಿ 13, ಇಂಡಿ-2, ಸಿಂದಗಿ-3, ಮುದ್ದೇಬಿಹಾಳದಲ್ಲಿ 2 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ದೈಹಿಕ ಅಂತರ ಕನಿಷ್ಠ ಮೂರು ಅಡಿ, ಪ್ರತಿ ಕೊಠಡಿಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳು ಇರಬೇಕು. ಒಂದು ಬೆಂಚ್‍ನಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಇದ್ದು, ಒಟ್ಟು 12 ಬೆಂಚ್‍ಗಳನ್ನು ಅಳವಡಿಸಬೇಕು. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಅತ್ಯುತ್ತಮವಾಗಿ ನಿರ್ವಹಣೆ ಮಾಡಲು, ಕೆಮ್ಮು, ನಗಡಿ, ಜ್ವರದಿಂದ ಬಳಲುತ್ತಿರುವ ಅಥವಾ ಕಂಟೈನ್ ಮೆಂಟ್ ವಲಯದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಒಂದು ವಿಶೇಷ ಕೊಠಡಿಯನ್ನು ಕಾಯ್ದಿರಿಸಲಾಗುವುದು ಎಂದು ತಿಳಿಸಿದರು.
ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕನಿಷ್ಠ ಒಂದು ಹೆಚ್ಚುವರಿ ಕೇಂದ್ರವನ್ನು ಗುರುತಿಸಿ ಕಾಯ್ದಿರಿಸಲಾಗುವುದು. ಪರೀಕ್ಷಾರ್ಥಿಗಳು ಯಾವುದೇ ರೀತಿಯ ರಿಶ್ಟ್ ವಾಚ್, ಸೈಂಟಿಫಿಕ್ ಕ್ಯಾಲಕುಲೇಟರ್, ಪೇಜರ್, ಮೊಬೈಲ್ ಹಾಗೂ ಇನ್ನಿತರೆ ಇಲೆಕ್ಟ್ರಾನಿಕ್ ಸಲಕರಣೆಗಳನ್ನು ಬಳಸದಂತೆ ಕ್ರಮಕೈಗೊಳ್ಳಬೇಕು. ಅಲ್ಲದೇ ಉಪ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇನ್ನುಳಿದ ಪರೀಕ್ಷಾ ಪರೀಕ್ಷಾ ಸಿಬ್ಬಂದಿ ಸಹ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅದರಂತೆ 20 ಪರೀಕ್ಷಾ ಕೇಂದ್ರಗಳ ಕಾಲೇಜಿನ ಪ್ರಾಚಾರ್ಯರು ಉಪಮುಖ್ಯ ಅಧೀಕ್ಷಕರಾಗಿರುತ್ತಾರೆ. ವೀಕ್ಷಕರನ್ನಾಗಿ 20 ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನಾಗಿ ನೇಮಿಸಿದ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದಲ್ಲಿ ಹಾಜರಾಗಿ ಪರೀಕ್ಷಾ ಕಾರ್ಯ ಮುಗಿಯುವವರೆಗೂ ಕೇಂದ್ರದಲ್ಲಿದ್ದು, ಪರೀಕ್ಷಾ ಕೇಂದ್ರದಲ್ಲಿದ್ದು ಪರೀಕ್ಷಾ ಬಗ್ಗೆ ಸಂಕ್ಷಿಪ್ತವಾಗಿ ವರದಿ ನೀಡಲು ಸೂಚಿಸಿದೆ. 20 ಪರೀಕ್ಷಾ ಕೇಂದ್ರಗಳಿಗೆ ಇಬ್ಬರು ಉಪನ್ಯಾಸಕರುಗಳನ್ನು ವಿಶೇಷ ಜಾಗೃತ ದಳದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ
ಪರೀಕ್ಷೆ ನಡೆಯುವ ವೇಳಾಪಟ್ಟಿ ಈ ರೀತಿ ಇದೆ. ಅಗಸ್ಟ್ 28 ರಂದು ಶನಿವಾರ ಬೆಳಗ್ಗೆ 10-30 ರಿಂದ 11-50 ರವರೆಗೆ ಜೀವಶಾಸ್ತ್ರ, ಅಂದು ಮಧ್ಯಾಹ್ನ 2-30 ರಿಂದ 3-50 ರ ವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ಆಗಸ್ಟ್ 29 ರಂದು ರವಿವಾರ ಬೆಳಗ್ಗೆ 10-30 ರಿಂದ 11-50 ರವರೆಗೆ ಭೌತಶಾಸ್ತ್ರ, ಅಂದು ಮಧ್ಯಾಹ್ನ 2-30 ರಿಂದ 3-50 ರ ವರೆಗೆ ರಸಾಯನಶಾಸ್ತ್ರ ಹಾಗೂ ಅಗಸ್ಟ್ 30 ರಂದು ಸೋಮವಾರ ಬೆಳಗ್ಗೆ 11-30 ರಿಂದ 12-30 ರವರೆಗೆ ಕನ್ನಡ ವಿಷಯದ ಕುರಿತು ಪರೀಕ್ಷೆ ನಡೆಯಲಿದೆ ಎಂದು ಅವರು ಸಭೆಗೆ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.