ವಿಜಯಪುರ: ʻನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ನನ್ನ ಮಗ ಉಳಿಯಲಿಲ್ಲ… ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು… ನನಗೆ ಬಹಳ ನೋವಾಗಿದೆ..ʼ ಈ ರೀತಿ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ವಾಟ್ಸಪ್ ಗ್ರೂಪ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಘಟನೆ ನಡೆದಿದೆ.
ವಿಜಯಪುರ ನಗರದ ಗಾಂಧಿಔಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಆಗಿರುವ ಎ.ಎಸ್ ಬಂಡುಗೊಳ ಅವರು ಜಿಲ್ಲಾ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಈ ರೀತಿ ಪೊಸ್ಟ್ ಹಾಕಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೊ ಮಗುವಿನ ಫೋಟೋದೊಂದಿಗೆ ಮೆಸೇಜ್ ಹಾಕಿದ್ದಾರೆ.
Advertisement
Advertisement
ಕಾನ್ಸ್‌ಟೇಬಲ್ ಎ.ಎಸ್ ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಮಗು ಮೃತಪಟ್ಟ ಬಳಿಕ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಈ ರೀತಿ ಮೆಸೇಜ್ ಹಾಕಿದ್ದಾರೆ. ಇನ್ನೂ ಈ ಘಟನೆಯನ್ನು ಡಿಜಿಪಿ, ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮಾಧ್ಯಮಗಳಿಗೆ ಜೊಹೇದ್ ಕಿಂಗ್ ಎಂಬ ಹೆಸರಿನ ಇನ್‌ಸ್ಟಾಗ್ರಾಮ್‌ನಿಂದ ಟ್ಯಾಗ್ ಕೂಡ ಮಾಡಲಾಗಿದೆ.
Advertisement
ಸದ್ಯ ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು ಎ.ಎಸ್ ಬಂಡುಗೋಳ ಯಾವುದೇ ರಜೆ ಕೇಳಿಲ್ಲ. ಮೌಖಿಕವಾಗಿ ಹಾಗೂ ಲಿಖಿತವಾಗಿ ಗಾಂಧಿಚೌಕ್ ಪೊಲೀಸ್ ಠಾಣಾಧಿಕಾರಿಗಳ ಬಳಿ ರಜೆ ಕೇಳಿಲ್ಲ. ಮೊನ್ನೆ ಹಾಗೂ ನಿನ್ನೆ ಅವರು ಕರ್ತವ್ಯಕ್ಕೂ ಹಾಜರಾಗಿಲ್ಲ ಎಂದಿದ್ದಾರೆ.
Advertisement
ಎ.ಎಸ್ ಬಂಡುಗೋಳ ಅವರ ಪತ್ನಿಗೆ ಇದು 3ನೇ ಹೆರಿಗೆ ಎಂದು ತಿಳಿದುಬಂದಿದ್ದು, ರಜೆಗಾಗಿ ಯಾವುದೇ ಮನವಿ ಮಾಡಿಲ್ಲ. ಇಲಾಖಾ ಸಿಬ್ಬಂದಿ ಗ್ರೂಪ್ ನಲ್ಲಿ ಈ ರೀತಿ ಪೋಸ್ಟ್ ಹಾಕಿದ್ದಾರೆ. ಘಟನೆ ಕುರಿತು ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟನೆ ನೀಡಿದ್ದಾರೆ.