Connect with us

Crime

ಲಾರಿ ಗುದ್ದಿದ ರಭಸಕ್ಕೆ ಬೊಲೆರೋ ಅಪ್ಪಚ್ಚಿ – ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Published

on

ವಿಜಯಪುರ: ಕಬ್ಬು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತ ಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಬುಲೆರೋ ವಾಹನದಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹತ್ತಿರದ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಯರಗಲ್ ಗ್ರಾಮದ ಬಳಿಯ ಎನ್ ಎಚ್ 218 ರಲ್ಲಿ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಹಾಗೂ ಗಾಯಾಳುಗಳು ಇಬ್ಬರನ್ನು ಬಳ್ಳಾರಿ ಮೂಲದವರೆಂದು ತಿಳಿದುಬಂದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಹೆಸರು ಮತ್ತು ವಿಳಾಸದ ಕುರಿತಾಗಿ ಸರಿಯಾದ ಮಾಹಿತಿ ದೊರೆತಿಲ್ಲ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

www.publictv.in