Connect with us

Chikkamagaluru

ವಿಜಯಪುರ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೆಚ್ಚಿದ ಆಕ್ರೋಶ- ಚಿಕ್ಕಮಗಳೂರಲ್ಲಿ ಬಂದ್‍ಗೆ ಕರೆ

Published

on

– 6 ಜನರ ವಿರುದ್ಧ ಎಫ್‍ಐಆರ್

ಚಿಕ್ಕಮಗಳೂರು: ವಿಜಯಪುರದಲ್ಲಿ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂರು ನಗರ ಬಂದ್‍ಗೆ ಕರೆ ನೀಡಲಾಗಿದೆ.

ವಿವಿಧ ಕನ್ನಡ ಪರ ಸಂಘಟನೆ, ದಲಿತ ಸಂಘಟನೆ ಹಾಗೂ ಮಹಿಳಾ ಸಂಘಟನೆಗಳು ಬಂದ್‍ಗೆ ಕರೆ ನೀಡಿದ್ದು, ಕಾಮುಕರನ್ನ ಶೀಘ್ರವೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಲ ವರ್ತಕರು ಮತ್ತು ಅಂಗಡಿಗಳು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನ ಬಂದ್ ಮಾಡಿದ್ದಾರೆ. ಇನ್ನೂ ಕೆಲವು ಅಂಗಡಿಗಳನ್ನ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬಾಗಿಲು ಹಾಕಿಸಿದ್ದಾರೆ. ಸರ್ಕಾರಿ ಬಸ್‍ಗಳನ್ನ ಡಿಪೋಗೆ ವಾಪಸ್ ಕಳುಹಿಸಿದ್ದು, ನಗರದಲ್ಲಿ ಆಟೋ ಸಂಚಾರ ಕೂಡ ತಾತ್ಕಾಲಿಕವಾಗಿ ಬಂದ್ ಆಗಿದೆ. ವಿವಿಧ ಸಂಘಟನೆಗಳು ಇಂದು ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಿವೆ.

ವಿಜಯಪುರದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರ ಮೇಲೆ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯ್ದೆ ಅಡಿ ಎಫ್‍ಐಆರ್ ದಾಖಲಾಗಿದೆ ಎಂದು ವಿಜಯಪುರ ಎಸ್‍ಪಿ ಕುಲದೀಪ್ ಜೈನ್ ಹೇಳಿದ್ದಾರೆ.

ಸದ್ಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಪ್ರಮುಖ ಆರೋಪಿ ದೀಪಕ್‍ಗಾಗಿ ಎರಡು ತಂಡ ರಚನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ತಿಳಿದಿದ್ದಾರೆ.

ಇದನ್ನು ಓದಿ: ಶಾಲೆಗೆ ಹೋಗುವಾಗ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್, ಕೊಲೆ!

ಇದನ್ನು ಓದಿ: ವಿಜಯಪುರದಲ್ಲಿ ದಲಿತ ಬಾಲಕಿಯ ರೇಪ್, ಕೊಲೆಗೆ ಸಿಎಂ ಖಂಡನೆ

 

Click to comment

Leave a Reply

Your email address will not be published. Required fields are marked *