ವಿಯಯಪುರ: ತಕ್ಷಣವೇ ಸಂಸದ ತೇಜಸ್ವಿ ಸೂರ್ಯ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಅನುದಾನ ಬೇಕಿಲ್ಲ ಎಂದಿದ್ದ ತೇಜಸ್ವಿ ಸೂರ್ಯ ಸಂತ್ರಸ್ತರ ಬಳಿ ಕ್ಷಮೆ ಕೇಳದಿದ್ದರೆ ಅವರ ಆಕ್ರೋಶ ಎದುರಿಸಬೇಕಾಗುತ್ತದೆ ಎಂದರು.
Advertisement
Advertisement
ಸಂತ್ರಸ್ತರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿ ಕನ್ನಡಿಗರಿಗೆ ಅಗೌರವ ಮಾಡಿದ್ದಾರೆ. ಕರ್ನಾಟಕದ ಬಗ್ಗೆ ಸಂಸದ ತೇಜಸ್ವಿ ಸೂರ್ಯಗೆ ಎಷ್ಟು ಕಾಳಜಿ ಇಟ್ಟುಕೊಂಡಿದ್ದಾರೆ ಎನ್ನುವುದು ಇದರಲ್ಲೇ ಗೊತ್ತಾಗುತ್ತದೆ. ಬೆಳಗಾವಿಯಲ್ಲಿ ಕುಳಿತು ಹೀಗೆ ಹೇಳುತ್ತಾರೆ. ದೆಹಲಿಯಲ್ಲಿ ಹೇಗೆ ಹೇಳಿರಬೇಡ. ಪ್ರಧಾನಿ ಮೋದಿ ಎದುರು ಏನು ಹೇಳಿರಬೇಕು. ಮೋದಿ ರಾಜ್ಯಕ್ಕೆ ಭೇಟಿ ಕೊಡದೆ ಇರೋದಕ್ಕೆ ತೇಜಸ್ವಿ ಸೂರ್ಯ ಕಾರಣ ಎಂದು ಪ್ರಶ್ನೆಗಳ ಸುರಿಮಳೆಗೈದರು. ತೇಜಸ್ವಿ ಸೂರ್ಯ ಮೋದಿಗೆ ಮಿಸ್ ಗೈಡ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಅನರ್ಹ ಶಾಸಕರ ಮುಂದಿನ ನಡೆಯ ಬಗ್ಗೆ ಗೊತ್ತಾಗುತ್ತಿಲ್ಲ. ಅನರ್ಹ ಶಾಸಕರು ಪಕ್ಷ ದ್ರೋಹ ಮಾಡಿದ್ದಾರೆ. ಅನರ್ಹ ಶಾಸಕರು ಕಾನೂನು ಬಾಹಿರ ಕೆಲಸ ಮಾಡಿದ್ದಾರೆ. ರಾಜ್ಯ ದ್ರೋಹ ಹಾಗೂ ಪ್ರಜಾಪ್ರಭುತ್ವದ ವಿರೋಧ ಕೆಲಸ ಮಾಡಿದ್ದಾರೆ ಎಂದು ಹರಿಹಾಯ್ದರು. ಅಲ್ಲದೆ ಅವರಿಗೆ ತಕ್ಕ ಪಾಠ ಆಗಬೇಕು. ಸುಪ್ರಿಂ ಕೋರ್ಟ್ ಸ್ಪೀಕರ್ ಆದೇಶ ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದರು.