ವಿಜಯಪುರ: ಕಲುಷಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ನಗರದ ಬಿಸಿಎಂ(ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ) ಹಾಸ್ಟೆಲ್‍ನಲ್ಲಿ ನಡೆದಿದೆ.
ನಗರದ ಅಲ್ ಅಮೀನ್ ಬಳಿ ಇರುವ ಬಿಸಿಎಂ ಹಾಸ್ಟೆಲಿನ 20ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, 10ಕ್ಕೂ ಅಧಿಕ ವಿದ್ಯಾರ್ಥಿನಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ನಗರದ ವಿವಿಧ ಆಸ್ಪತ್ರೆಗಳಿಗೆ ವಿದ್ಯಾರ್ಥಿನಿಯರನ್ನು ದಾಖಲಿಸಲಾಗಿದೆ.
Advertisement
5ಕ್ಕೂ ಹೆಚ್ಚು ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅಡುಗೆಯಲ್ಲಿ ಹುಳುಗಳು ಬಂದಿದ್ದರಿಂದ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನೆಲೆ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥರಾಗಿದ್ದು, ವೇದಾಂತ ಖಾಸಗಿ ಆಸ್ಪತ್ರೆಯಲ್ಲಿ 3 ವಿದ್ಯಾರ್ಥಿನಿಯರನ್ನು ದಾಖಲಿಸಲಾಗಿದೆ. 15ಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.