ವಿಜಯಪುರ: ಸಿಎಂ ಹಾಗೂ ಮೈತ್ರಿ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗಕ್ಕೆ ಪ್ರಾತಿನಿಧ್ಯ ಕೊಡುವ ಪದ್ಧತಿಯನ್ನು ಸಿಎಂ ಬಿಟ್ಟಿದ್ದಾರೆ. ಉತ್ತರ ಕರ್ನಾಟಕಕ್ಕೆ ಕೆಲವು ಕಚೇರಿಗಳನ್ನು ಸ್ಥಳಾಂತರ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಲ್ಲಿಯವರೆಗೂ ಒಂದೇ ಒಂದು ಕಚೇರಿ ಬಂದಿಲ್ಲ. ಹೀಗಾಗಿ ಉತ್ತರ ಕರ್ನಾಟಕದ ಜನಪ್ರತಿನಿಧಿಗಳು ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಗುಡುಗಿದರು.
Advertisement
Advertisement
ನನ್ನನ್ನು ಮಂತ್ರಿ ಮಾಡಿಲ್ಲ, ನಿನ್ನನ್ನು ಮಂತ್ರಿ ಮಾಡಲಿಲ್ಲ ಎಂಬ ವಿಚಾರಕ್ಕೆ ಜಗಳ ನಡೆದಿದೆ. ಹೀಗಾಗಿ ಸಿಎಂ ಹಾಗೂ ಡಿಸಿಎಂ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದು, ಕರ್ನಾಟಕ ಅಂದ್ರೆ ಕೇವಲ ಬೆಂಗಳೂರು ಹಾಗೂ ಮೈಸೂರು ಅಲ್ಲ. ಉತ್ತರ ಕರ್ನಾಟಕದ ಕಡೆಗೂ ಗಮನ ಹರಿಸಿ ಅಂತ ತಿಳಿಸಿದ್ದೇನೆ ಎಂದು ಹೇಳಿದರು.
Advertisement
ಐಎಂಎ ಬಹುಕೋಟಿ ವಂಚನೆ ಪ್ರಕರಣದ ವಿಚಾರವಾಗಿ ಬಿಜೆಪಿಗೆ ಟಾಂಗ್ ನೀಡಿದ ಅವರು, ಐಎಂಎ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಹೀಗೆ ಆರೋಪ ಮಾಡುವುದು ಸರಿಯಲ್ಲ. ಅಂತಿಮ ತೀರ್ಮಾನ ಆಗುವವರೆಗೂ ಏನು ಹೇಳುವುದಕ್ಕೆ ಬರುವುದಿಲ್ಲ. ಪ್ರಕರಣದ ಕುರಿತು ತನಿಖೆ ಆರಂಭವಾಗಿದೆ ಎಂದು ಹೇಳಿದರು.